ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಚಿರತೆ ದಾಳಿಗೆ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂ ಪರಿಹಾರ; ಸೆರೆಗೆ ವಿಶೇಷ ತಂಡ ರಚನೆ: ಸಿಎಂ ಬೊಮ್ಮಾಯಿ

ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. 

ಬೆಂಗಳೂರು: ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. 

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಂಗಳೂರು ಮತ್ತು ಮೈಸೂರಿನ ಕೆಲವು ಭಾಗಗಳಲ್ಲಿ ಕಂಡುಬಂದಿರುವ ಚಿರತೆಗಳನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಚಿರತೆಗಳನ್ನು ಸೆರೆ ಹಿಡಿದು ಕಾಡಿಗೆ ಬಿಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಆನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಿದಂತೆ ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ನೀಡಲಾಗುವುದು. ಕಾಡಿನಲ್ಲಿದ್ದ ಚಿರತೆಗಳು ಈಗ ನಾಡಿನತ್ತ ಬರುತ್ತಿದ್ದು ಬೆಂಗಳೂರಿನ ಸುತ್ತಮುತ್ತ ಓಡಾಡುತ್ತಿರುವುದು ಜನತೆಯನ್ನು ಭಯಭೀತಗೊಳಿಸಿದೆ.  ಚಿರತೆಯನ್ನು ಜೀವಂತವಾಗಿ ಸೆರೆಹಿಡಿದು ಕಾಡಿಗೆ ಬಿಡಲು ಸೂಚನೆ ನೀಡಲಾಗಿದೆ ಎಂದರು.

ವಿಶೇಷ ತಂಡ: ಬೆಂಗಳೂರು ಮತ್ತು ಮೈಸೂರು ವಲಯದ ಆನೆ ಕಾರಿಡಾರ್ ಸುತ್ತಮುತ್ತ ಚಿರತೆಗಳಿವೆ. ಚಿರತೆ ದಾಳಿ ಆಗುತ್ತಿರುವುದನ್ನು ತಡೆಯಲು ವಿಶೇಷ ತಂಡ ರಚಿಸಲಾಗಿದೆ. ಬೆಂಗಳೂರು ಹೊರವಲಯದ ತುರಹಳ್ಳಿಯಲ್ಲಿ ಚಿರತೆ ಕಾಣಿಸಿಕೊಂಡು ಸುತ್ತಮುತ್ತಲ ಜನರಲ್ಲಿ ತೀವ್ರ ಆತಂಕವನ್ನುಂಟುಮಾಡಿದೆ. ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಅದೇ ರೀತಿ ಇತ್ತೀಚೆಗೆ ಮೈಸೂರು, ಮಂಡ್ಯದಲ್ಲಿಯೂ ಚಿರತೆ ಕಾಣಿಸಿಕೊಂಡಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ