ರಾಜ್ಯ

ವಸತಿ ಯೋಜನೆಯಲ್ಲಿ ಶೇ.3 ರಷ್ಟು ದಿವ್ಯಾಂಗರಿಗೆ ಮೀಸಲು: ಮುಖ್ಯಮಂತ್ರಿ ಬೊಮ್ಮಾಯಿ

Nagaraja AB

ಬೆಂಗಳೂರು: ದಿವ್ಯಾಂಗರಿಗೆ ವಸತಿ ಯೋಜನೆಯಲ್ಲಿ ಶೇ.3 ರಷ್ಟು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  

ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿಂದು ಆಯೋಜಿಸಿದ್ದ ವಿಶ್ವ ವಿಶೇಷ ಚೇತನರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಿವ್ಯಾಂಗರಿಗೆ 5 ಲಕ್ಷ ರೂ. ವರೆಗೆ ಸರ್ಕಾರಿ ವೆಚ್ಚದಲ್ಲಿ ಅರೋಗ್ಯ ಸೇವೆ ಒದಗಿಸುವ ವಿಮಾ ಯೋಜನೆ ಜಾರಿ ಮಾಡಲಾಗುವುದು ಎಂದರು. 

ದಿವ್ಯಾಂಗರ ವಿದ್ಯಾಭ್ಯಾಸಕ್ಕೆ ನೆರವಾಗಲು ಮುಂಬರುವ ಬಜೆಟ್ ನಲ್ಲಿ ವಿಶೇಷ ಅನುದಾನ ಒದಗಿಸಲಾಗುವುದು, ಬುದ್ಧಿಮಾಂದ್ಯ ಮಕ್ಕಳಿಗೆ ಶೆಲ್ಟರ್ ಡ್ ವರ್ಕ್ ಶಾಪ್ ಗಳನ್ನು ತೆರೆಯಲಾಗುವುದು ಮತ್ತು ವಿಶೇಷ ಚೇತನರಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯುತ್ ಚಾಲಿತ ಮೂರು ಚಕ್ರಗಳ ಬೈಸಿಕಲ್ ವಿತರಿಸಲಾಗುವುದು ಎಂದು ಅವರು ತಿಳಿಸಿದರು. 

ಬುದ್ದಿಮಾಂದ್ಯ, ಶ್ರವಣ ದೋಷವುಳ್ಳ, ಅಂಧ ಮಕ್ಕಳ ಸ್ಕಾಲರ್ ಶಿಪ್ ಗಳನ್ನು ದಾಖಲೆ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ವಸತಿ ನಿಲಯಗಳಿಗೆ ಅಗತ್ಯ ಅನುದಾನ ನೀಡಿ, ಮಾಸಿಕ ನಿರ್ವಹಣಾ ವೆಚ್ಚವನ್ನು ಸಹ ಏರಿಸಲಾಗಿದೆ ಎಂದು ಅವರು ತಿಳಿಸಿದರು. 

SCROLL FOR NEXT