ಸಿಎಂ ಬೊಮ್ಮಾಯಿ 
ರಾಜ್ಯ

ಬಿಜೆಪಿ ಜನಸಂಕಲ್ಪ ಯಾತ್ರೆಗೆ ಜನತೆಯಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಬಿಜೆಪಿಯ 'ಜನ ಸಂಕಲ್ಪ ಯಾತ್ರೆ'ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಭಾನುವಾರ ಹೇಳಿದ್ದಾರೆ.

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿಯ 'ಜನ ಸಂಕಲ್ಪ ಯಾತ್ರೆ'ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಭಾನುವಾರ ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಹತ್ತಿರ ಇರುವುದರಿಂದ ಪ್ರತಿ ಬಾರಿಯಂತೆ ಜನರ ಬಳಿ ಹೋಗುತ್ತಿದ್ದೇವೆ. ನಮ್ಮ ಜನ ಸಂಕಲ್ಪ ಯಾತ್ರೆ ಈಗಾಗಲೇ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ನಡೆದಿದೆ. ಈ ಯಾತ್ರೆಯನ್ನು ತೀವ್ರಗೊಳಿಸುತ್ತೇವೆ ಎಂದು ಹೇಳಿದ್ದಾರೆ.

ಇದರ ಜೊತೆಗೆ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ, ಜನರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಲ್ಲಿ ಗೋಡೆ ಬರಹ ವಿಚಾರವಾಗಿ ಮಾತನಾಡಿ, ಈ ಸಂಬಂಧ ಸ್ಥಳೀಯ ಪೊಲೀಸರು ತನಿಖೆ ಮಾಡುತ್ತಿದ್ದು, ಕ್ರಮಕೈಗೊಳ್ಳುತ್ತಿದ್ದಾರೆಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT