ಪ್ರಾತಿನಿಧಿಕ ಚಿತ್ರ 
ರಾಜ್ಯ

ನೋಟಿಸ್ ಜಾರಿ ಬಳಿಕ ಪೊಲೀಸರ ಮುಂದೆ ಹಾಜರಾದ ಅಮಾನತುಗೊಂಡಿರುವ ಇಬ್ಬರು ಬಿಬಿಎಂಪಿ ಅಧಿಕಾರಿಗಳು

ಮತದಾರರ ಮಾಹಿತಿ ಕಳ್ಳತನ ಪ್ರಕರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಇಬ್ಬರು ಹಿರಿಯ ಅಧಿಕಾರಿಗಳು ನೋಟಿಸ್ ಜಾರಿಯಾದ ನಂತರ ಹಲಸೂರು ಪೊಲೀಸರ ಮುಂದೆ ಹಾಜರಾಗಿದ್ದಾರೆ.

ಬೆಂಗಳೂರು: ಮತದಾರರ ಮಾಹಿತಿ ಕಳ್ಳತನ ಪ್ರಕರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಇಬ್ಬರು ಹಿರಿಯ ಅಧಿಕಾರಿಗಳು ನೋಟಿಸ್ ಜಾರಿಯಾದ ನಂತರ ಹಲಸೂರು ಪೊಲೀಸರ ಮುಂದೆ ಹಾಜರಾಗಿದ್ದಾರೆ.

ಬಿಬಿಎಂಪಿ ಆಡಳಿತ ಆಯುಕ್ತ ಎಸ್ ರಂಗಪ್ಪ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಆಗಿದ್ದಾರೆ.

ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಮಾಹಿತಿ ಕಳ್ಳತನ ಪ್ರಕರಣ ವರದಿಯಾಗಿದೆ.

ಇದಕ್ಕೂ ಮೊದಲು ಕೆ. ಶ್ರೀನಿವಾಸ್ ಅವರು ತಮ್ಮ ವಕೀಲರ ಮೂಲಕ ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿ 10 ದಿನಗಳ ಕಾಲಾವಕಾಶ ಕೋರಿದ್ದರು. ಆದರೆ, ಶನಿವಾರ ಮಧ್ಯಾಹ್ನ 3.30ರ ಸುಮಾರಿಗೆ ಪೊಲೀಸರ ಮುಂದೆ ಹಾಜರಾಗಿದ್ದರು. ರಂಗಪ್ಪ ಬೆಳಗ್ಗೆ ತನಿಖಾಧಿಕಾರಿಗಳ ಮುಂದೆ ಹಾಜರಾದರು.

ಟಿಎನ್ಐಇಯೊಂದಿಗೆ ಮಾತನಾಡಿದ ಕೇಂದ್ರ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, 'ಅಮಾನತುಗೊಂಡ ಅಧಿಕಾರಿಗಳಿಬ್ಬರಿಗೂ ಮತದಾರರ ಡೇಟಾ ಟ್ಯಾಂಪರಿಂಗ್ ಪ್ರಕರಣ ಮತ್ತು ನಕಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಮತ್ತು ಬೂತ್ ಮಟ್ಟದ ಸಮಿತಿ ಕಾರ್ಡ್‌ಗಳಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಲಾಗಿದೆ. ಈ ಪ್ರಶ್ನೆಗಳಿಗೆ ಅಧಿಕಾರಿಗಳು ಸರಿಯಾಗಿ ಉತ್ತರಿಸಲು ಸಾಧ್ಯವಾಗಲಿಲ್ಲ ಮತ್ತು ಉತ್ತರಿಸಲು ಹೆಚ್ಚಿನ ಸಮಯ ಕೇಳಿದ್ದಾರೆ ಎಂದು ತಿಳಿಸಿದ್ದಾರೆ.

ಅಧಿಕಾರಿಗಳು ತನಿಖೆ ಸಮಯದಲ್ಲಿ ಯಾವುದೇ ತೃಪ್ತಿಕರ ಉತ್ತರವನ್ನು ನೀಡದ ಕಾರಣ, ಇನ್ನೂ ಮೂರು ಬಾರಿ ವಿಚಾರಣೆಗೆ ಕರೆದರೂ ಇಬ್ಬರೂ ಬರಬೇಕಾಗುತ್ತದೆ ಎಂದು ಅಧಿಕಾರಿ ಹೇಳಿದರು.
ಆರೋಪಿ ಸಂಖ್ಯೆ 8 ಮಾರುತಿ ಗೌಡ ಮತ್ತು ಆರೋಪಿ ಸಂಖ್ಯೆ 9  ಅಭಿಷೇಕ್‌ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ  ಪ್ರಕರಣದಲ್ಲಿ ಈವರೆಗೆ 13 ಮಂದಿಯನ್ನು ಬಂಧಿಸಲಾಗಿದೆ.

ಕೆಂಪೇಗೌಡ ಜಯಂತಿ ಆಚರಣೆ ಸಾಧ್ಯತೆ ಇಲ್ಲ

ಮತದಾರರ ಮಾಹಿತಿ ಕಳ್ಳತನ ಪ್ರಕರಣದಲ್ಲಿ ಇಕ್ಕಟ್ಟಿಗೆ ಸಿಲುಕಿರುವ ಬಿಬಿಎಂಪಿ ಈ ಬಾರಿ ಕೆಂಪೇಗೌಡ ಜಯಂತಿ ಆಚರಿಸುವ ಸಾಧ್ಯತೆ ಕಡಿಮೆಯಾಗಿದ್ದು, 70 ಅಧಿಕಾರಿಗಳಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಈ ಸಂಬಂಧ ಈಗಾಗಲೇ ನಾಲ್ಕೈದು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಹೀಗಾಗಿ, ಅಧಿಕಾರಿಗಳು ಬಂಧನಕ್ಕೆ ಒಳಗಾಗುವ ಭಯದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೆ ಸಂಬಂಧಿಸಿದ ಹಲವು ಕಡತಗಳು ಇನ್ನೂ ಸರ್ಕಾರದ ಅನುಮೋದನೆಗೆ ಕಳುಹಿಸಿಲ್ಲ.

ಅಲ್ಲದೆ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಕಡತಗಳನ್ನು ತೆರವುಗೊಳಿಸುವ ಪ್ರಕ್ರಿಯೆಗೆ ಹೊಡೆತ ಬಿದ್ದಿದೆ ಎಂದು ಬಿಬಿಎಂಪಿ ಆಡಳಿತ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಿರಿನಾಥ್ ಅವರು ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿರುವುದರಿಂದ ಕೆಂಪೇಗೌಡ ಜಯಂತಿ ಆಚರಣೆ ಕುರಿತು ಇನ್ನೂ ನಿರ್ಧರಿಸಿಲ್ಲ ಎಂದು ಗಿರಿನಾಥ್ ಹೇಳಿದ್ದಾರೆ.

ಇದೇ ವೇಳೆ, ಕೆಂಪೇಗೌಡ ವಿಜ್ಞಾನ ಸಂಸ್ಥೆ (ಕಿಮ್ಸ್‌) ಒಕ್ಕಲಿಗ ಸಂಘದ ಅಧ್ಯಕ್ಷ ಬಾಲಕೃಷ್ಣ ಮಾತನಾಡಿ, 2020ರಿಂದ ಇಲ್ಲಿಯವರೆಗೆ ನಡೆಯದಿರುವ ಕೆಂಪೇಗೌಡ ಜಯಂತಿಯನ್ನು ಬಿಬಿಎಂಪಿಯಲ್ಲಿ ಆಚರಿಸಲು ಮತ್ತೊಮ್ಮೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಮ್ಮ ಸಂಘ ಮನವಿ ಮಾಡಲಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT