ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಂಗಳೂರು: ಮೃತದೇಹ ಪತ್ತೆಯಾದ ಎರಡು ತಾಸಿನಲ್ಲೇ ಕೊಲೆ ಪ್ರಕರಣ ಭೇದಿಸಿದ ಪೊಲೀಸರು

ಕೊಲೆ ಪ್ರಕರಣ ವರದಿಯಾದ ಎರಡು ಗಂಟೆಗಳಲ್ಲಿಯೇ ಹೆಣ್ಣೂರು ಪೊಲೀಸರು ಭೇದಿಸಿದ್ದು, ಅಪ್ರಾಪ್ತ ವಯಸ್ಕ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

ಬೆಂಗಳೂರು: ಕೊಲೆ ಪ್ರಕರಣ ವರದಿಯಾದ ಎರಡು ಗಂಟೆಗಳಲ್ಲಿಯೇ ಹೆಣ್ಣೂರು ಪೊಲೀಸರು ಭೇದಿಸಿದ್ದು, ಅಪ್ರಾಪ್ತ ವಯಸ್ಕ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

ಸಂಜೆ 4 ಗಂಟೆ ಸುಮಾರಿಗೆ ರಾಜಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆಯಾಗಿತ್ತು. ಮೃತನನ್ನು ನೇಪಾಳ ಮೂಲದ ಧನ ಸಿಂಗ್ (23) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ಥ ಬಾಬುಸಾಪಾಳ್ಯದ ಪಿಜಿ ವಸತಿಗೃಹದಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಇತರ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆರೋಪಿಗಿಂತ ದೊಡ್ಡವನಾಗಿದ್ದ ಧನ ಸಿಂಗ್ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹೀಗಾಗಿ ನೇಪಾಳ ಮೂಲದ ಆರೋಪಿಗಳು ಆತನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು. ನವೆಂಬರ್ 30 ರ ರಾತ್ರಿ ಕುಡಿದ ಅಮಲಿನಲ್ಲಿದ್ದ ಸಿಂಗ್ ಆರೋಪಿಗಳನ್ನು ಕೂಗಲು ಪ್ರಾರಂಭಿಸಿದನು. ಯೋಜನೆಯ ಪ್ರಕಾರ, ಮೂವರು ರಾಜಕಾಲುವೆ ಬಳಿ ಹೋದರು ಮತ್ತು ಇನ್ನಿಬ್ಬರು ಸಿಗರೇಟ್ ಖರೀದಿಸುವ ನೆಪದಲ್ಲಿ ಆತನನ್ನು ಹೊರಗೆ ಕರೆತಂದರು. ಸ್ಥಳಕ್ಕಾಗಮಿಸಿದ ಅವರು ಬೆಲ್ಟ್‌ನಿಂದ ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!