ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ 
ರಾಜ್ಯ

ವಿವಿಧ ವಿಶ್ವವಿದ್ಯಾಲಯಗಳ 1,000 ನಕಲಿ ಸರ್ಟಿಫಿಕೇಟ್, ಸೀಲ್ ಗಳ ವಶ- ಪ್ರತಾಪ್ ರೆಡ್ಡಿ

ಪಿಹೆಚ್ ಡಿ, ಸ್ನಾತಕೋತ್ತರ ಸೇರಿದಂತೆ ವಿವಿಧ ಪದವಿಗಳ ನಕಲಿ ಸರ್ಟಿಫಿಕೇಟ್ ತಯಾರಿಸುತ್ತಿದ್ದ ಜಾಲವೊಂದನ್ನು ಬೇಧಿಸುವಲ್ಲಿ ಬೆಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಪಿಹೆಚ್ ಡಿ, ಸ್ನಾತಕೋತ್ತರ ಸೇರಿದಂತೆ ವಿವಿಧ ಪದವಿಗಳ ನಕಲಿ ಸರ್ಟಿಫಿಕೇಟ್ ತಯಾರಿಸುತ್ತಿದ್ದ ಜಾಲವೊಂದನ್ನು ಬೇಧಿಸುವಲ್ಲಿ ಬೆಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ವಿವಿಧ ವಿಶ್ವವಿದ್ಯಾಲಯಗಳು ಮತ್ತು ಪ್ರತಿಷ್ಠಿತ ಸಂಸ್ಥೆಗಳ ಹೆಸರಿನಲ್ಲಿ ಪಿಹೆಚ್ ಡಿ, ಸ್ನಾತಕೋತ್ತರ ಸೇರಿದಂತೆ ವಿವಿಧ ಪದವಿಗಳ ನಕಲಿ ಸರ್ಟಿಫಿಕೇಟ್ ತಯಾರಿಕೆ ಕುರಿತ ಸುದ್ದಿ ತಿಳಿದ ನಂತರ ಕಾರ್ಯಾಚರಣೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.

ದಾಳಿ ವೇಳೆಯಲ್ಲಿ ವಿವಿಧ ವಿಶ್ವವಿದ್ಯಾಲಯಕ್ಕೆ ಸೇರಿದ  ಸುಮಾರು 1,000 ನಕಲಿ ಸರ್ಟಿಫಿಕೇಟ್ ಮತ್ತು ಸೀಲ್ ಗಳು ಪತ್ತೆಯಾಗಿದೆ. ಈ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಕಲಿ ಸರ್ಟಿಫಿಕೇಟ್ ಜಾಲದಲ್ಲಿ ಮತ್ತಷ್ಟು ಮಂದಿ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಬಲೆ ಬೀಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!