ಮಾರತ್ತಹಳ್ಳಿ ಸೇತುವೆ ಮೇಲೆ ನಿಧಾನಗತಿಯ ಸಂಚಾರ 
ರಾಜ್ಯ

ಬೆಂಗಳೂರು: ಸುಗಮ ಸಂಚಾರಕ್ಕೆ ಮಾರತ್ತಹಳ್ಳಿಯಲ್ಲಿ ಕೆಳಸೇತುವೆ ನಿರ್ಮಾಣ!

ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿನ ಸಂಚಾರ ದಟ್ಟಣೆ ಸಮಸ್ಯೆ ನಿವಾಹಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಾರತ್ತಹಳ್ಳಿಯ ಹೊರ ವರ್ತುಲ ರಸ್ತೆಗೆ ಸಮಾನಾಂತರವಾಗಿರುವ ರೈಲ್ವೆ ಸೇತುವೆಯಲ್ಲಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ಕೆಳಸೇತುವೆ ನಿರ್ಮಾಣ ಮಾಡುತ್ತಿದೆ.

ಬೆಂಗಳೂರು: ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿನ ಸಂಚಾರ ದಟ್ಟಣೆ ಸಮಸ್ಯೆ ನಿವಾಹಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಾರತ್ತಹಳ್ಳಿಯ ಹೊರ ವರ್ತುಲ ರಸ್ತೆಗೆ ಸಮಾನಾಂತರವಾಗಿರುವ ರೈಲ್ವೆ ಸೇತುವೆಯಲ್ಲಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ಕೆಳಸೇತುವೆ ನಿರ್ಮಾಣ ಮಾಡುತ್ತಿದೆ.

ಈ ಕೆಳಸೇತುವೆ ಯೋಜನೆಯು ಕುಂದಲಹಳ್ಳಿ ಮತ್ತು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಚಾರವನ್ನು ಸುಗಮಗೊಳಿಸುವ ನಿರೀಕ್ಷೆಯಿದೆ.

ಯೋಜನೆಯಿಂದಾಗಿ 20-30 ದಿನಗಳ ಕಾಲ ಸಂಚಾರಕ್ಕೆ ತೊಂದರೆಯಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳಉ ಮನವಿ ಮಾಡಿಕೊಂಡಿದ್ದಾರೆ.

ರಸ್ತೆ ಮೂಲಭೂತ ಸೌಕರ್ಯ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ವಿ.ಜಯಶಂಕರ ರೆಡ್ಡಿ ಅವರು ಮಾತನಾಡಿ, ಪ್ರಸ್ತುತ, ವಾಹನ ಸವಾರರು ಮುನ್ನೆಕೊಳಾಲ ಮತ್ತು ಇತರ ಪ್ರದೇಶಗಳಿಗೆ ಯು-ಟರ್ನ್ ತೆಗೆದುಕೊಳ್ಳಲು 1.5 ಕಿಮೀ ದೂರ ಪ್ರಯಾಣಿಸಬೇಕಾದ ಅನಿವಾರ್ಯತೆ ಇದೆ. ಕಾಮಗಾರಿ ಪೂರ್ಣಗೊಂಡ ಬಳಿಕ ವಾಹನ ಸವಾರರು ಕೆಳಸೇತುವೆಯನ್ನು ಬಳಕೆ ಮಾಡಬಹುದು ಎಂದು ಹೇಳಿದ್ದಾರೆ.

ಈಗಾಗಲೇ ಒಂದು ಬದಿಯ ಕಾಮಗಾರಿ ಪೂರ್ಣಗೊಂಡಿದ್ದು, ಒಂದು ಮುಖ್ಯರಸ್ತೆ ವಾಹನ ಸವಾರರಿಗೆ ತೆರೆದಿರುವುದರಿಂದ ಈ ರಸ್ತೆಯಲ್ಲಿ ನಿಧಾನಗತಿಯ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ. ಕಾಮಗಾರಿಯಿಂದಾಗಿ 20 ದಿನಗಳ ಕಾಲ ವಾಹನ ಸವಾರರಿಗೆ ಸಮಸ್ಯೆಗಳಾಗಬಹುದು, ಅಂಡರ್ ಪಾಸ್ ಕಾಮಗಾರಿ ಪೂರ್ಣಗೊಳ್ಳಲು 30 ದಿನ ಬೇಕು ಎಂದು ತಿಳಿಸಿದ್ದಾರೆ.

ಆರಂಭದಲ್ಲಿ  ಪಾಲಿಕೆ ಭೂಸ್ವಾಧೀನ ಸಮಸ್ಯೆಗಳನ್ನು ಎದುರಿಸಿತ್ತು. ಆದರೆ, ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಮಧ್ಯೆ ಪ್ರವೇಶಿಸಿದ ಬಳಿಕ ಸಮಸ್ಯೆ ಬಗೆಹರಿದಿತ್ತು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT