ರವಿ ಉಕ್ಕುಂದ ಮತ್ತು ಮಧು 
ರಾಜ್ಯ

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಸಿಂದಗಿ ಸರ್ಕಲ್ ಇನ್ಸ್ ಪೆಕ್ಟರ್ ರವಿ ಉಕ್ಕುಂದ ಮತ್ತು ಪತ್ನಿ ಸಾವು

ಸಿಂದಗಿ ಸರ್ಕಲ್ ಇನ್ಸ್ ಪೆಕ್ಟರ್ ರವಿ ಉಕ್ಕುಂದ ಹಾಗೂ ಅವರ ಪತ್ನಿ ಮಧು ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಪಿಐ ರವಿ ಉಕ್ಕುಂದ ಚಲಾಯಿಸುತ್ತಿದ್ದ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ವಿಜಯಪುರ: ಸಿಂದಗಿ ಸರ್ಕಲ್ ಇನ್ಸ್ ಪೆಕ್ಟರ್ ರವಿ ಉಕ್ಕುಂದ (43) ಹಾಗೂ ಅವರ ಪತ್ನಿ ಮಧು (39) ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.

ಸಿಂದಗಿಯಿಂದ ಕಲಬುರ್ಗಿಗೆ ಬುಧವಾರ ಸ್ವಿಫ್ಟ್‌ ಡಿಸೈರ್‌ ಕಾರಿನಲ್ಲಿ ತೆರಳುತ್ತಿರುವಾಗ ಜೇವರ್ಗಿ ತಾಲ್ಲೂಕಿನ ನೆಲೋಗಿ ಕ್ರಾಸ್‌ನಲ್ಲಿ ರಸ್ತೆ ಬದಿ ನಿಂತಿದ್ದ ಕಂಟೈನರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಇಬ್ಬರೂ ಸಾವಿಗೀಡಾಗಿದ್ದಾರೆ.

ಸಿಪಿಐ ರವಿ ಉಕ್ಕುಂದ ಚಲಾಯಿಸುತ್ತಿದ್ದ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ರವಿ ಅವರು ಮೂಲತಃ ಕೊಪ್ಪಳ  ಜಿಲ್ಲೆಯವರು. ರಿವಿ ಉಕ್ಕುಂದ ಅವರು ವಿಜಯಪುರ ಜಿಲ್ಲೆ ಸಿಂಧಗಿ ಠಾಣೆಯಲ್ಲಿ ಸಿಪಿಐ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕಲಬುರಗಿಯ ಆಸ್ಪತ್ರೆಗೆಂದು ಸಿಂಧಗಿಯಿಂದ ಪತ್ನಿ ಜತೆಗೆ ರವಿ ಉಕ್ಕುಂದ ಅವರು ಸ್ವಂತ ಕಾರಿನಲ್ಲಿ ತೆರಳುವಾಗ ಮಾರ್ಗಮಧ್ಯೆ ಅಪಘಾತ ಸಂಭವಿಸಿದೆ.

ರವಿ ಉಕ್ಕುಂದ ಅವರೇ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು. ರಸ್ತೆ ಕ್ರಾಸ್​ ಮಾಡುವಾಗ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲೇ ದಂಪತಿ ದುರಂತ ಅಂತ್ಯ ಕಂಡಿದ್ದಾರೆ. ನೆಲೋಗಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸದಲ್ಲೇ ಮೊದಲು; ಪ್ರತಿಭಟಿಸುವುದಾದರೇ ಸದನದ ಬಾವಿಗೆ ಬನ್ನಿ: ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ, ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!