ಮಹದೇವಪುರ ವಿಧಾನಸಭಾ ಕ್ಷೇತ್ರದ ವಿಶೇಷ ಅಧಿಕಾರಿ ಅಜಯ್ ನಾಗಭೂಷಣ್ ಬುಧವಾರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ನಡೆಸಿದರು. 
ರಾಜ್ಯ

ಮತದಾರರ ಮಾಹಿತಿ ಕಳವು ಪ್ರಕರಣ: ವಿಶೇಷ ಅಧಿಕಾರಿಯಿಂದ ಸರ್ವಪಕ್ಷ ಸಭೆ, ಪರಿಷ್ಕೃತ ಮತದಾರರ ಪಟ್ಟಿಗೆ ಆಕ್ಷೇಪಣೆಗಳ ಆಹ್ವಾನ

ಮತದಾರರ ಮಾಹಿತಿ ಕಳವು ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಲು ನಿಯೋಜನೆಗೊಂಡಿರುವ ವಿಶೇಷಾಧಿಕಾರಿ ಅಜಯ್ ನಾಗಭೂಷಣ್ ಅವರು, ಬುಧವಾರ ಸರ್ವಪಕ್ಷ ಸಭೆ ನಡೆಸಿದ್ದು, ಈ ವೇಳೆ ಪರಿಷ್ಕೃತ ಮತದಾರರ ಪಟ್ಟಿಗೆ ಆಕ್ಷೇಪಣೆ ಆಹ್ವಾನ ನೀಡಿದ್ದಾರೆ.

ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಲು ನಿಯೋಜನೆಗೊಂಡಿರುವ ವಿಶೇಷಾಧಿಕಾರಿ ಅಜಯ್ ನಾಗಭೂಷಣ್ ಅವರು, ಬುಧವಾರ ಸರ್ವಪಕ್ಷ ಸಭೆ ನಡೆಸಿದ್ದು, ಈ ವೇಳೆ ಪರಿಷ್ಕೃತ ಮತದಾರರ ಪಟ್ಟಿಗೆ ಆಕ್ಷೇಪಣೆ ಆಹ್ವಾನ ನೀಡಿದ್ದಾರೆ.

ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಮುಖಂಡ ನಲ್ಲೂರಹಳ್ಳಿ ನಾಗೇಶ್ ಅವರು, ಬೂತ್ ನಂ. 283, 284, 285 ಮತ್ತು 286 ಮತ್ತು ಪ್ರತಿ ಬೂತ್‌ನಿಂದ ಅಳಿಸಲಾದ ಸುಮಾರು 30 ಹೆಸರುಗಳು ಇನ್ನೂ ಪ್ರಸ್ತುತವಾಗಿವೆ ಎಂದು ಹೇಳಿದರು.

ಮತದಾರರ ಜಾಗೃತಿ ಕಾರ್ಯಕ್ರಮಕ್ಕಾಗಿ ಬಿಜೆಪಿ ನಾಯಕರು ಹಾಗೂ ಬಿಬಿಎಂಪಿ ಅಧಿಕಾರಿಗಳು ಚಿಲುಮೆ ಸಂಸ್ಥೆಗೆ ಜವಾಬ್ದಾರಿ ನೀಡಿದ್ದು, ಬಿಜೆಪಿ ಹಾಗೂ ಬಿಬಿಎಂಪಿಯೇ ಈ ಅಕ್ರಮಗಳಿಗೆ ಕಾರಣವಾಗಿದೆ ಎಂದು ಆರೋಪಿಸಿದರು.

ಒಂದು ಬೂತ್‌ನಲ್ಲಿ ಇಷ್ಟು ಮಟ್ಟದಲ್ಲಿ ಹೆಸರುಗಳನ್ನು ಅಳಿಸಿರುವುದಾದರೆ, ಇಲ್ಲಿರುವ ಎಲ್ಲಾ ಬೂತ್‌ಗಳಿಂದ ಎಷ್ಟು ಹೆಸರುಗಳು ಕಾಣೆಯಾಗಿವೆ ಎಂಬುದನ್ನು ಊಹಿಸಿ. ಈ ಹಿಂದೆಯೂ ಈ ಬೆಳವಣಿಗೆಗಳಾಗಿದ್ದವು ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತ ಸಮುದಾಯದವರು, ಒಬಿಸಿಗಳು ಪ್ರಮುಖವಾಗಿ ಕಾಂಗ್ರೆಸ್ ಮತ್ತು ಬಿಜೆಪಿಯೇತರ ಪಕ್ಷಗಳ ಬೆಂಬಲಿಗರ ಹೆಸರುಗಳನ್ನು ಅಳಿಸಲಾಗಿದೆ ಎಂದು ಅವರು ಹೇಳಿದರು

ಅಮಾನತುಗೊಂಡಿರುವ ಕಂದಾಯ ಅಧಿಕಾರಿ ಚಂದ್ರಶೇಖರ್ ಒಬ್ಬರೇ ಅಲ್ಲ ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಇನ್ನೂ ಹಲವು ಹಿರಿಯ ಅಧಿಕಾರಿಗಳು ಮತ್ತು ಬಿಜೆಪಿ ಮುಖಂಡರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿದರು.

ಸಭೆಯಲ್ಲಿ ಮಹದೇವಪುರ ಕ್ಷೇತ್ರದಲ್ಲಿ 479 ಮತಗಟ್ಟೆಗಳಿದ್ದು, ಬಹುತೇಕ ಎಲ್ಲ ಬೂತ್‌ಗಳಲ್ಲಿ ಹೆಸರು ಅಳಿಸಿ ಹಾಕಲಾಗಿದೆ ಎಂದು ಕಾಂಗ್ರೆಸ್, ಜೆಡಿಎಸ್ ಮತ್ತು ಇತರ ರಾಜಕೀಯ ಪಕ್ಷಗಳ ಮುಖಂಡರು ಒಕ್ಕೊರಲಿನಿಂದ ಹೇಳಿದರು.

ಈ ವೇಳೆ ಮಾತನಾಡಿದ ಅಧಿಕಾರಿಗಳು, ಎಲ್ಲಾ ಬೂತ್ ಗಳಲ್ಲಿಯೂ ಪಟ್ಟಿಯನ್ನು ಮರಪರಿಶೀಲಿಸಿ 8 ದಿನಗಳಲ್ಲಿ ವರದಿ ನೀಡುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT