ರಾಜ್ಯ

ಮಾಂಡೌಸ್ ಚಂಡಮಾರುತ: ಡಿಸೆಂಬರ್ 13 ರವರೆಗೆ ಬೆಂಗಳೂರಿನಲ್ಲಿ ಮಳೆ, 6 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

Sumana Upadhyaya

ಬೆಂಗಳೂರು: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ 'ಮಾಂಡೌಸ್' ಚಂಡಮಾರುತದಿಂದ ಉತ್ತರ ಕರಾವಳಿ ತಮಿಳುನಾಡು, ಪುದುಚೇರಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದ್ದು, ಪಕ್ಕದ ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ಉತ್ತರ ಒಳನಾಡಿನ ತಮಿಳುನಾಡು ಮತ್ತು ರಾಯಲಸೀಮಾದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಬೆಂಗಳೂರಿನಲ್ಲಿ ಇಂದಿನಿಂದ ಡಿಸೆಂಬರ್ 13ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಡಿಸೆಂಬರ್ 13 ರವರೆಗೆ ಹಳದಿ ಅಲರ್ಟ್ ಘೋಷಿಸಿದೆ.

ಮಾಂಡೌಸ್ ಚಂಡಮಾರುತವು ಕಳೆದ ಆರು ಗಂಟೆಗಳಲ್ಲಿ 11 ಕಿಮೀ ವೇಗದಲ್ಲಿ ಪಶ್ಚಿಮ ವಾಯುವ್ಯಕ್ಕೆ ಚಲಿಸಿ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ತೀವ್ರವಾಯಿತು. ಉತ್ತರ ತಮಿಳುನಾಡು, ಪುದುಚೇರಿ ಮತ್ತು ಪಕ್ಕದ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ಪುದುಚೇರಿ ಮತ್ತು ಶ್ರೀಹರಿಕೋಟಾ ನಡುವೆ ಇಂದು ಮಧ್ಯರಾತ್ರಿ ಗಂಟೆಗೆ 85 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.

SCROLL FOR NEXT