ರಾಜ್ಯ

ಮಲೆನಾಡು ಭಾಗದಲ್ಲಿ ಆನೆಗಳ ಹಾವಳಿ: ಸಮಸ್ಯೆ ಕುರಿತು ಚರ್ಚಿಸಲು ಕೇಂದ್ರಕ್ಕೆ ಸಂಸದ ಪ್ರಜ್ವಲ್ ರೇವಣ್ಣ ನೇತೃತ್ವದ ನಿಯೋಗ

Sumana Upadhyaya

ಹಾಸನ: ಹಾಸನ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಆನೆ ಹಾವಳಿ ಕುರಿತು ಚರ್ಚಿಸಲು ಚುನಾಯಿತ ಪ್ರತಿನಿಧಿಗಳು ಮತ್ತು ಹಿರಿಯ ಅರಣ್ಯಾಧಿಕಾರಿಗಳ ನಿಯೋಗವನ್ನು ಶೀಘ್ರದಲ್ಲೇ ಕೇಂದ್ರಕ್ಕೆ ಕೊಂಡೊಯ್ಯಲಾಗುವುದು ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ. ಸಕಲೇಶಪುರದಲ್ಲಿ ನಿನ್ನೆ ನಡೆದ ಚುನಾಯಿತ ಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯ ನಂತರ ಈ ತೀರ್ಮಾನ ಕೈಗೊಂಡಿದ್ದಾರೆ. 

ಮಲೆನಾಡು ಭಾಗದಲ್ಲಿ ವಾಸಿಸುತ್ತಿರುವ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರಕ್ಕೆ ಅರಿವಿದೆ. ನಿಯೋಗವು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲಿದೆ ಎಂದರು. 

ಆನೆಗಳನ್ನು ಆವಾಸಸ್ಥಾನಗಳಿಂದ ಹಿಡಿದು ಸ್ಥಳಾಂತರಿಸಲು ಕೇಂದ್ರವು ಅನುಮತಿ ನೀಡುವುದಿಲ್ಲ ಆದರೆ ಅಪಾಯವನ್ನು ಎದುರಿಸಲು ಪರ್ಯಾಯ ಕ್ರಮಗಳನ್ನು ಸೂಚಿಸಬಹುದು ಎಂದು ಹೇಳಿದರು. ಇತ್ತೀಚೆಗೆ ಆಲೂರು ಮತ್ತು ಸಕಲೇಶಪುರ ತಾಲೂಕಿನ ಆನೆ ಪೀಡಿತ ಪ್ರದೇಶಗಳಲ್ಲಿ ವಾಸ್ತವ ಸ್ಥಿತಿಯ ಬಗ್ಗೆ ಅಧ್ಯಯನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿರಿಯ ಅಧಿಕಾರಿಗಳ ತಂಡವನ್ನು ಕಳುಹಿಸಿತ್ತು. ತಂಡವು ಇತ್ತೀಚೆಗೆ ಸಲ್ಲಿಸಿದ ವರದಿಯನ್ನು ಅಧ್ಯಯನ ಮಾಡಿದ ನಂತರ ಸಿಎಂ ಆನೆಗಳ ಹಾವಳಿಯನ್ನು ಎದುರಿಸಲು ಕಾರ್ಯಪಡೆಯನ್ನು ರಚಿಸಿದ್ದಾರೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ.

SCROLL FOR NEXT