ಸಿಎಂ ಬೊಮ್ಮಾಯಿ 
ರಾಜ್ಯ

ಕರ್ನಾಟಕ-ಮಹಾರಾಷ್ಟ್ರ ಗಡಿಗಳಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ: ಸಿಎಂ ಬೊಮ್ಮಾಯಿ

ಕರ್ನಾಟಕ-ಮಹಾರಾಷ್ಟ್ರ ಗಡಿಗಳಲ್ಲಿನ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಎಂದಿನಂತೆ ಬಸ್ ಸಂಚಾರಗಳು ಮುಂದುವರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದರು.

ಮೈಸೂರು: ಕರ್ನಾಟಕ-ಮಹಾರಾಷ್ಟ್ರ ಗಡಿಗಳಲ್ಲಿನ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಎಂದಿನಂತೆ ಬಸ್ ಸಂಚಾರಗಳು ಮುಂದುವರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸೋಮವಾರ ದೂರವಾಣಿ ಕರೆ ಮೂಲಕ ಗಡಿ ವಿವಾದ ಕುರಿತು ಮಾತುಕತೆ ನಡೆಸಿದ್ದರು. ಈ ವೇಳೆ ಎರಡೂ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಿರ್ಧರಿಸಲಾಗಿತ್ತು. ಗಡಿಯಲ್ಲಿ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಎಲ್ಲಾ ಬಸ್‌ಗಳು ಕಾರ್ಯಾಚರಣೆಯನ್ನು ಪುನರಾರಂಭಿಸಿವೆ ಎಂದು ಹೇಳಿದರು.

ಗಡಿ ವಿವಾದ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಡಿಸೆಂಬರ್ 14 ಅಥವಾ 15 ರಂದು ಸಭೆ ನಡೆಯಲಿದೆ. ಸೋಮವಾರದಂದು ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದೆ. ನಾನೂ ಕೂಡ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದರು.

ಕರ್ನಾಟಕದ ವಿಚಾರ, ನಿಲುವು, ವಾಸ್ತವಾಂಶವನ್ನು ಈಗಾಗಲೇ ಅಮಿತ್ ಶಾ ಅವರಿಗೆ ತಿಳಿಸಲಾಗಿದೆ. ಹಲವಾರು ವಿವರಗಳನ್ನು ಸಹ ನೀಡಲಾಗಿದೆ. ಭೇಟಿಯಾದ ಸಂದರ್ಭದಲ್ಲಿ ಕರ್ನಾಟಕದ ನಿಲುವನ್ನು ಅವರಿಗೆ ಸ್ಪಷ್ಟಪಡಿಸಲಾಗುವುದು ಎಂದರು.

ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದ ಮುಖ್ಯಮಂತ್ರಿಗಳು, ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿರುವುದು ಯಾವುದೇ ವ್ಯತ್ಯಾಸ ಆಗುವುದಿಲ್ಲ. ಈ ಹಿಂದೆ ಕೂಡ ಮಹಾರಾಷ್ಟ್ರ ಈ ರೀತಿಯ ಪ್ರಯತ್ನ ಮಾಡಿದೆ‌. ಈ ಪ್ರಕರಣ ಸುಪ್ರೀಂ ಕೊರ್ಟ್ ನಲ್ಲಿದೆ. ಸುಪ್ರೀಂ ಕೋರ್ಟ್ ನಲ್ಲಿ ನಮ್ಮ ನ್ಯಾಯ ಸಮ್ಮತ ಪ್ರಕರಣ ಗಟ್ಟಿಯಾಗಿದೆ. ಗಡಿ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಸೋಮವಾರ ಕರ್ನಾಟಕದ ಸಂಸದರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ತಿಳಿಸಿದ್ದೇನೆ. ನಾನೂ ಕೂಡ ರಾಜ್ಯದ ನ್ಯಾಯ ಸಮ್ಮತ ನಿಲುವನ್ನು ತಿಳಿಸಲು ಕೇಂದ್ರ ಗೃಹ ಸಚಿವರನ್ನು ಶೀಘ್ರವೇ ಭೇಟಿ ಮಾಡಲಿದ್ದೇನೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT