ಪೊಲೀಸ್ (ಸಾಂಕೇತಿಕ ಚಿತ್ರ) 
ರಾಜ್ಯ

ಯುವ ವಕೀಲನ ಮೇಲೆ ಹಲ್ಲೆ: ರಾಜ್ಯಾದ್ಯಂತ ವಕೀಲರ ಪ್ರತಿಭಟನೆ, ಪಿಎಸ್‌ಐ ಅಮಾನತು

ಯುವ ವಕೀಲನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ವಕೀಲರ ಪ್ರತಿಭಟನೆ ವ್ಯಾಪಕವಾಗಿರುವ ಹಿನ್ನಲೆಯಲ್ಲಿ ಹಲ್ಲೆ ಆರೋಪ ಎದುರಿಸುತ್ತಿರುವ ಪಿಎಸ್‌ಐರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಮಂಗಳೂರು: ಯುವ ವಕೀಲನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ವಕೀಲರ ಪ್ರತಿಭಟನೆ ವ್ಯಾಪಕವಾಗಿರುವ ಹಿನ್ನಲೆಯಲ್ಲಿ ಹಲ್ಲೆ ಆರೋಪ ಎದುರಿಸುತ್ತಿರುವ ಪಿಎಸ್‌ಐರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ರಾಜ್ಯಾದ್ಯಂತ ವಕೀಲರ ತೀವ್ರ ಒತ್ತಡಕ್ಕೆ ಮಣಿದ ಪಶ್ಚಿಮ ವಲಯ ಐಜಿಪಿ ಪುಂಜಾಲಕಟ್ಟೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸುತೇಶ್ ಅವರನ್ನು ಅಮಾನತುಗೊಳಿಸಿ ಭಾನುವಾರ ಆದೇಶ ಹೊರಡಿಸಲಾಗಿದೆ. ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ವಕೀಲರು ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದ್ದರು.

ಗೇಟ್ ತೆಗೆದು ವ್ಯಕ್ತಿಯೊಬ್ಬರ ಆಸ್ತಿಗೆ ನುಗ್ಗಿದ ಆರೋಪದ ಮೇಲೆ ವಕೀಲರ ವಿರುದ್ಧ ಐಪಿಸಿ ಸೆಕ್ಷನ್ 379 ಮತ್ತು 447 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಡಿಸೆಂಬರ್ 2 ರ ರಾತ್ರಿ, ಸಂತ್ರಸ್ಥ ವಕೀಲ ಕುಲದೀಪ್ ಶೆಟ್ಟಿ ಮತ್ತು ಅವರ ತಾಯಿ ಮತ್ತು ಸಹೋದರನ ತೀವ್ರ ಪ್ರತಿರೋಧದ ನಡುವೆಯೂ ಪೊಲೀಸರು ಕುಲದೀಪ್ ಶೆಟ್ಟಿಯನ್ನು ಬಂಧಿಸಿದ್ದರು. ನಂತರ ಆವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಬಿಡುಗಡೆಗೂ ಮೊದಲು ಆತನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕುಲದೀಪ್ ಶೆಟ್ಟಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಘಟನೆ ಬೆಳಕಿಗೆ ಬಂದ ತಕ್ಷಣ ರಾಜ್ಯಾದ್ಯಂತ ವಕೀಲರು ಪೊಲೀಸರ ದೌರ್ಜನ್ಯವನ್ನು ಆರೋಪಿಸಿ ಪ್ರತಿಭಟನೆ ನಡೆಸಿದರು. ಪೊಲೀಸರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ವಕೀಲರ ಸಂಘ ಒತ್ತಾಯಿಸಿದೆ. ಶನಿವಾರ ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಪಿಎಸ್‌ಐ ಅಮಾನತುಗೊಳಿಸುವಂತೆ ಮಂಗಳೂರು ವಕೀಲರ ಸಂಘ ಮನವಿ ಪತ್ರ ಕೂಡ ಸಲ್ಲಿಸಿತ್ತು.

ಇದೀಗ ಆರೋಪಿ ಪೊಲೀಸ್ ಅಧಿಕಾರಿ ಸುತೇಶ್ ಅವರನ್ನು ಅಮಾನತುಗೊಳಿಸಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT