ರಾಜ್ಯ

‘ಸಲಾಂ ಆರತಿ’ ಹೆಸರು ಬದಲಿಸುವ ನಿರ್ಧಾರ ಸರಿಯಾಗಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ

Manjula VN

ಮಂಗಳೂರು: ಯಾವುದೋ ಗುಲಾಮಿ ಪರಿಸ್ಥಿತಿಯಲ್ಲಿ ಸಲಾಂ ಆರತಿ ಪದ್ಧತಿ ಚಾಲ್ತಿಗೆ ಬಂದಿತ್ತು. ಈಗ ಅಂತಹ ಪದ್ಧತಿ ಬದಲಾಗಬೇಕು. ಕನಿಷ್ಠ ನಮ್ಮ ದೇವಾಲಯಗಳಲ್ಲಿ ಸಾಂಸ್ಕೃತಿಕ ನೆಲೆಗಟ್ಟು ಗಟ್ಟಿಗೊಳಿಸದಿದ್ದಲ್ಲಿ ಮತ್ತೆ ಎಲ್ಲಿ ಆಗೋದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದ್ದಾರೆ.

ಖಾಸಗಿ ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಆಗಮಿಸಿದ ಅವರು, ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು.

‘ಸಲಾಂ ಆರತಿ’ (ಕೆಲವು ದೇವಾಲಯಗಳಲ್ಲಿ ಮೈಸೂರು ರಾಜ ಟಿಪ್ಪು ಸುಲ್ತಾನನ ಹೆಸರಿನಲ್ಲಿ ನಡೆಯುವ ಆಚರಣೆಗಳು) ಹೆಸರು  ಬದಲಿಸುವ ಸರ್ಕಾರದ ನಿರ್ಧಾರ ಸರಿಯಾಗಿದೆ. ನಮ್ಮ ಸಂಸ್ಕೃತಿಯನ್ನು ಬಲಪಡಿಸುವ ಕೆಲಸವನ್ನು ದೇವಸ್ಥಾನಗಳಲ್ಲಿ ಕೈಗೊಳ್ಳದಿದ್ದರೆ ಇನ್ನೆಲ್ಲಿ ಆಗಬೇಕು? ಎಂದು ಪ್ರಶ್ನಿಸಿದರು.

ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ಯಾರೂ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು. ಶಾಂತಿ ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು. ಇತ್ತೀಚಿಗೆ ದ.ಕ.ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಎಲ್ಲವೂ ಸರಿಯಾಗಿದೆ. ಒಂದೆರಡು ಹತ್ಯೆ ಪ್ರಕರಣಗಳು ಬಿಟ್ಟರೆ ಮತ್ತೆಲ್ಲವೂ ಆ ಮಟ್ಟದಲ್ಲಿ ಯಾವುದೂ ನಡೆದಿಲ್ಲ ಎಂದು ತಿಳಿಸಿದರು.

SCROLL FOR NEXT