ATM ಯಂತ್ರವನ್ನೇ ಕದ್ದೊಯ್ದ ಖತರ್ನಾಕ್ ಕಳ್ಳರು 
ರಾಜ್ಯ

ಬೆಂಗಳೂರಿನಲ್ಲಿ ATM ಯಂತ್ರವನ್ನೇ ಕದ್ದೊಯ್ದ ಖತರ್ನಾಕ್ ಕಳ್ಳರು, ಸಿಸಿಟಿವಿ ವಿಡಿಯೋ ವೈರಲ್!

ಬೆಂಗಳೂರಿನಲ್ಲಿ ಖತರ್ನಾಕ್ ಕಳ್ಳರ ಗ್ಯಾಂಗ್ ವೊಂದು ATM ಯಂತ್ರವನ್ನೇ ಕದ್ದೊಯ್ದಿದ್ದು, ಈ ಕಳ್ಳತನದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಖತರ್ನಾಕ್ ಕಳ್ಳರ ಗ್ಯಾಂಗ್ ವೊಂದು ATM ಯಂತ್ರವನ್ನೇ ಕದ್ದೊಯ್ದಿದ್ದು, ಈ ಕಳ್ಳತನದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರಿನ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಹರಳೂರು ರಸ್ತೆಯಲ್ಲಿ ಬ್ಯಾಂಕ್ ಆಫ್ ಬರೋಡ ಶಾಖೆಗೆ ಸೇರಿದ ಎಟಿಎಂ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಡಿ. 10ರಂದು ರಾತ್ರಿ ಕಳ್ಳರು ವಾಹನದಲ್ಲಿ ಬಂದು ಎಟಿಎಂ ಮಿಷನ್‍ಗೆ ಅಳವಡಿಸಿದ್ದ ವೈರ್‍ಗಳನ್ನು ಕತ್ತರಿಸಿ ಎಟಿಎಂ ಯಂತ್ರವನ್ನೇ ಎತ್ತಿಕೊಂಡು ಪರಾರಿಯಾಗಿದ್ದಾರೆ.

ಮೂಲಗಳ ಪ್ರಕಾರ ಚಾಲಾಕಿ ಕಳ್ಳರು ಗೂಡ್ಸ್ ವಾಹನದಲ್ಲಿ ಬಂದು 3.16 ಲಕ್ಷ ರೂ. ಹಣವಿದ್ದ ಎಟಿಎಂ ಯಂತ್ರವನ್ನೇ ಕದ್ದೊಯ್ದಿದ್ದಾರೆ. ಎಟಿಎಂ ಕೇಂದ್ರದಲ್ಲಿ ಸೆಕ್ಯುರಿಟಿ ಗಾರ್ಡ್ ನಿಯೋಜಿಸಲಾಗಿತ್ತು. ಅವರು ಎಟಿಎಂ ಕೇಂದ್ರ ಕಟ್ಟಡದ ಸೆಲ್ಲಾರ್‍ನಲ್ಲಿ ಮಲಗಿದ್ದ ಕಾರಣ ಮಿಷನ್ ಕಳ್ಳತನವಾಗಿರುವುದು ಅವರ ಗಮನಕ್ಕೆ ಬಂದಿಲ್ಲ. ಮುಂಜಾನೆ ಎದ್ದು ನೋಡಿದಾಗ ಎಟಿಎಂ ಮಿಷನ್ ನಾಪತ್ತೆಯಾಗಿರುವುದನ್ನು ಕಂಡು ಗಾಬರಿಯಾಗಿ ಬರೋಡ ಬ್ಯಾಂಕಿನ ಮ್ಯಾನೇಜರ್‍ಗೆ ವಿಷಯ ತಿಳಿಸಿದ್ದಾರೆ. ಮ್ಯಾನೇಜರ್ ಅವರು ಸ್ಥಳಕ್ಕಾಗಮಿಸಿ ನೋಡಿ ನಂತರ ಬೆಳ್ಳಂದೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಎರಡು ತಂಡ ರಚನೆ:
ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ಳಂದೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಣದ ಸಮೇತ ಎಟಿಎಂ ಯಂತ್ರವನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಕಳ್ಳರ ಪತ್ತೆಗಾಗಿ ಎರಡು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ವೈಟ್‍ಫೀಲ್ಡ್ ವಿಭಾಗದ ಡಿಸಿಪಿ ಗಿರೀಶ್ ಅವರು ತಿಳಿಸಿದ್ದಾರೆ. ಆರೋಪಿಗಳ ಸುಳಿವಿದ್ದು, ಆದಷ್ಟು ಬೇಗ ಎಟಿಎಂ ಮಿಷನ್ ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT