ರಾಜ್ಯ

ಕೊನೆಗೂ ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಸರ್ಕಾರ ಆದೇಶ

Lingaraj Badiger

ಚಿತ್ರದುರ್ಗ: ಕೊನೆಗೂ ರಾಜ್ಯ ಸರ್ಕಾರ ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿದೆ.  ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನ ಮುರುಘಾಮಠದ ಆಡಳಿತಾಧಿಕಾರಿ ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಪಿಎಸ್ ವಸ್ತ್ರದ್ ಅವರನ್ನು ಮುರುಘಾಮಠದ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಅವರು  ಇಂದು ಆದೇಶ ಹೊರಡಿಸಿದ್ದಾರೆ.

ಮಠದ ಲೆಕ್ಕಪತ್ರ ನಿರ್ವಹಣೆ, ಮಠದ ಚರ ಸ್ಥಿರಾಸ್ತಿ ಹಿತದೃಷ್ಟಿಯಿಂದ ಆಡಳಿತಾಧಿಕಾರಿ ನೇಮಿಸಲಾಗಿದೆ. ವಸ್ತ್ರದ್ ಅವರು ಮುರುಘಾಮಠದ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿವಮೂರ್ತಿ ಮುರುಘಾ ಶರಣರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದ್ದು, ಅವರು ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ಭಕ್ತರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರು.

SCROLL FOR NEXT