ಲಾರಿ ಢಿಕ್ಕಿಯಾಗಿ ಹೆಣ್ಣಾನೆ ಸಾವು 
ರಾಜ್ಯ

ಬಂಡೀಪುರ: ಲಾರಿ ಡಿಕ್ಕಿಯಾಗಿ ಹೆಣ್ಣಾನೆ ಸಾವು

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಲಾರಿ ಢಿಕ್ಕಿಯಾಗಿ ಹೆಣ್ಣಾನೆಯೊಂದು ಸಾವನ್ನಪ್ಪಿದೆ.

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಲಾರಿ ಢಿಕ್ಕಿಯಾಗಿ ಹೆಣ್ಣಾನೆಯೊಂದು ಸಾವನ್ನಪ್ಪಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಕೇರಳಕ್ಕೆ‌ ಹೋಗುವ ರಾಷ್ಟ್ರೀಯ ಹೆದ್ದಾರಿ 766ಯಲ್ಲಿ (ಎನ್ ಎಚ್ 766) ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆಯೊಂದು ಮಂಗಳವಾರ ರಾತ್ರಿ ಮೃತಪಟ್ಟಿದೆ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಕೇರಳ ಕಡೆಯಿಂದ ಬರುತ್ತಿದ್ದ ತಮಿಳುನಾಡು ನೋಂದಣಿಯ ಲಾರಿ ಆನೆಗೆ ಡಿಕ್ಕಿ ಹೊಡೆದಿದೆ.

ಮದ್ದೂರು ವಲಯದಲ್ಲಿ ಈ ಅಪಘಾತ ಸಂಭವಿಸಿದ್ದು, ರಾತ್ರಿ 9 ಗಂಟೆಯ ನಂತರ ಈ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ನಿಷೇಧವಿದ್ದು, ಅದಕ್ಕೂ ‌ಮೊದಲೇ ಈ ಘಟನೆ ನಡೆದಿದೆ ಎಂದು ಅರಣ್ಯ‌ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧವಾದ ಬಳಿಕ ವಾಹನ ಅಪಘಾತದಲ್ಲಿ ದೊಡ್ಡ ಪ್ರಾಣಿಯೊಂದು ಮೃತಪಡುತ್ತಿರುವುದು ಇದೇ ಮೊದಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್