ಹೈಕೋರ್ಟ್ 
ರಾಜ್ಯ

ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ: ಹೈಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ 5 ಲಕ್ಷ ದಂಡ

ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರ ಹಾಗೂ ಕರ್ನಾಟಕದ ಪಂಚಾಯತ್ ರಾಜ್ ಡೀಲಿಮಿಟೇಷನ್ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಬೆಂಗಳೂರು: ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರ ಹಾಗೂ ಕರ್ನಾಟಕದ ಪಂಚಾಯತ್ ರಾಜ್ ಡೀಲಿಮಿಟೇಷನ್ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

 ಮೀಸಲಾತಿ ಹಾಗೂ ಡೀಲಿಮಿಟೇಷನ್ ನ ಸಂಪೂರ್ಣ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಲು ಫೆ.1, 2023 ರ ವೇಳೆಗೆ ಪೂರ್ಣಗೊಳಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಗಡುವು ವಿಧಿಸಿದೆ. 

ನ್ಯಾ. ಪ್ರಸನ್ನ ಬಿ ವರಾಳೆ, ನ್ಯಾ. ಅಶೋಕ್ ಎಸ್ ಕಿಣಗಿ ಅವರಿದ್ದ ವಿಭಾಗೀಯ ಪೀಠ, ಈ ಆದೇಶ ಪ್ರಕಟಿಸಿದ್ದು, ರಾಜ್ಯ ಚುನಾವಣಾ ಆಯೋಗ (ಎಸ್ಇಸಿ) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಗೆ  ಡೀಲಿಮಿಟೇಷನ್ ಆಯೋಗ ಸಲ್ಲಿಸಿದ್ದ ಇಂಪ್ಲೀಡಿಂಗ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಚುನಾವಣೆ ಹಾಗೂ ಇತರ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದಕ್ಕೆ ಎರಡು ಬಾರಿ 12 ವಾರಗಳ ಸಮಯ ನೀಡಲಾಗಿತ್ತು. 12 ವಾರಗಳಲ್ಲಿ ಒಂದು ಇಂಚಿನ ಬೆಳವಣಿಗೆಯೂ ಆಗಿಲ್ಲ ಎಂದು ಕೋರ್ಟ್ ಗಮನಿಸಿದೆ.

ಡೀಲಿಮಿಟೇಷನ್ ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನಿಧಾನಗತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಆಯೋಗ 90 ದಿನಗಳ ವಿಸ್ತರಣೆಗೆ ಮನವಿ ಮಾಡಿತ್ತು, ಆದರೆ ಸರ್ಕಾರದ ಅಧಿಕಾರಿಗಳು ಆಮೆಗತಿಯಲ್ಲಿ ಸಾಗುತ್ತಿದ್ದಾರೆ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT