ಅಟ್ಟಿಕಾ ಬಾಬು 
ರಾಜ್ಯ

ಪತ್ನಿ ಮೇಲೆ ಹಲ್ಲೆ, ಕದ್ದ ಚಿನ್ನ ಖರೀದಿ ಆರೋಪ: ಅಟ್ಟಿಕಾ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ಬಂಧನ

ಪತ್ನಿ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿರುವ ದೂರಿನನ್ವಯ ಪೊಲೀಸರು ಅಟ್ಟಿಕಾ ಗೋಲ್ಡ್‌ ಕಂಪೆನಿ ಮಾಲೀಕ ಅಟ್ಟಿಕಾ ಬಾಬು ಬಂಧಿಸಿದ್ದಾರೆ.

ಬೆಂಗಳೂರು: ಪತ್ನಿ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿರುವ ದೂರಿನನ್ವಯ ಪೊಲೀಸರು ಅಟ್ಟಿಕಾ ಗೋಲ್ಡ್‌ ಕಂಪೆನಿ ಮಾಲೀಕ ಅಟ್ಟಿಕಾ ಬಾಬು ಬಂಧಿಸಿದ್ದಾರೆ.

ಶೇಕ್ ಮೀನಾಜ್ ಎಂಬವರನ್ನು ಮದುವೆ ಆಗಿದ್ದ ಆಯೂಬ್ ಅಲಿಯಾಸ್ ಅಟ್ಟಿಕಾ ಬಾಬು, ಡಿಸೆಂಬರ್ 12ರಂದು ಯಲ್ಲೂರಿಗೆ ತೆರಳಿ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಪತ್ನಿ ಮೇಲೆ ಹಲ್ಲೆ ಮಾಡಿ ಮನೆಯಲ್ಲಿ ಇದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಲ್ಲದೆ, ಕೊಲೆಗೆ ಯತ್ನಿಸಿದ್ದಾರೆ ಎಂದು ಶೇಕ್‌ ಮೀನಾಜ್‌ ದೂರು ನೀಡಿದ್ದರು.

ಕೇಸ್ ದಾಖಲು ಮಾಡಿ ಆರೋಪಿಯನ್ನು ಹುಡುಕಿಕೊಂಡು ಯಲ್ಲೂರು ಪೊಲೀಸರು ಬಂದಿದ್ದರು. ಸಿಸಿಬಿ ಹಾಗೂ ಹೈಗ್ರೌಂಡ್ಸ್ ಪೊಲೀಸರ ಸಹಾಯದಿಂದ ಶುಕ್ರವಾರ ಅಟ್ಟಿಕಾ ಬಾಬು ವಶಕ್ಕೆ ಪಡೆಯಲಾಗಿದೆ.

ವಶಕ್ಕೆ ಪಡೆದ ಯಲ್ಲೂರು ಪೊಲೀಸರು ಅನಂತಪುರಕ್ಕೆ ಕರೆದೊಯ್ದಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ಅಟ್ಟಿಕಾ ಗೋಲ್ಡ್ ಬಾಬು ಬಂಧನ ಬೆನ್ನಲ್ಲೇ ಕಳ್ಳರಿಂದ ಕದ್ದ ಚಿನ್ನ ಪಡೆದುಕೊಳ್ಳುತ್ತಿದ್ದ ಎಂಬ ಆರೋಪವೂ ಕೇಳಿ ಬಂದಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT