ಶಂಕರ್ ಮತ್ತು ಅವರ ಕುಟುಂಬ ಕೊಪ್ಪಳದ ಕಾರಟಗಿ ಗ್ರಾಮದಲ್ಲಿ ಹಿಂದೂ ಧರ್ಮಕ್ಕೆ ಮರಳಿದರು. 
ರಾಜ್ಯ

ಘರ್ ವಾಪಸಿ: ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ಸಾದ ಕುಟುಂಬ!

ಮುಂಬರುವ ವಿಧಾನಸಭೆ ಚುನಾವಣೆ ವೇಳೆಗೆ ಮತಾಂತರ ವಿರೋಧಿ ಮಸೂದೆ ಮಂಡನೆಗೆ ರಾಜ್ಯ ಸರ್ಕಾರ ಕಸರತ್ತು ನಡೆಸುತ್ತಿರುವ ನಡುವಲ್ಲೇ ಕೊಪ್ಪಳ ಜಿಲ್ಲೆಯ ಕಾರಟಗಿ ಗ್ರಾಮದಲ್ಲಿ ಘರ್ ವಾಪ್ಸಿ ಮಾಡಿರುವ ಘಟನೆಯೊಂದು ನಡೆದಿದೆ.

ಕೊಪ್ಪಳ: ಮುಂಬರುವ ವಿಧಾನಸಭೆ ಚುನಾವಣೆ ವೇಳೆಗೆ ಮತಾಂತರ ವಿರೋಧಿ ಮಸೂದೆ ಮಂಡನೆಗೆ ರಾಜ್ಯ ಸರ್ಕಾರ ಕಸರತ್ತು ನಡೆಸುತ್ತಿರುವ ನಡುವಲ್ಲೇ ಕೊಪ್ಪಳ ಜಿಲ್ಲೆಯ ಕಾರಟಗಿ ಗ್ರಾಮದಲ್ಲಿ ಘರ್ ವಾಪ್ಸಿ ಮಾಡಿರುವ ಘಟನೆಯೊಂದು ನಡೆದಿದೆ.

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ಹಿಂದೂ ಕುಟುಂಬವೊಂದು ಮತ್ತೆ ತಮ್ಮ ಮೂಲ ಧರ್ಮಕ್ಕೆ ಹಿಂದಿರುಗಿದ್ದಾರೆ.

ಆರ್ಥಿಕ ಹಿನ್ನಲೆಯಲ್ಲಿ ನಾಲ್ಕು ವರ್ಷಗಳ ಹಿಂದೆ ಕುಟುಂಬವೊಂದು ಬಲವಂತವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿತ್ತು. ಇದೀಗ ಕುಟುಂಬ ಸದಸ್ಯರ ಆಶಯದಂತೆ ಹಿಂದೂ ಜಾಗರಣ ವೇದಿಕೆಯು ಕಾರಟಗಿ ಗ್ರಾಮದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿ ಕುಟುಂಬವನ್ನು ಮೂಲ ಧರ್ಮಕ್ಕೆ ಹಿಂತಿರುಗುವಂತೆ ಮಾಡಿದ್ದಾರೆ.

ಹಿಂದೂ ಜಾಗರಣ ವೇದಿಕೆಯನ್ನು ಸಂಪರ್ಕಿಸಿದ ಕೊಪ್ಪಳದ ಶಂಕರ್ ಕೆ, ಕ್ರೈಸ್ತ ಧರ್ಮವನ್ನು ಸ್ವೀಕರಿಸಲು ನನಗೆ ಸಂತೋಷವಿಲ್ಲ. "ಮತಾಂತರವು ನನಗೆ ಅಥವಾ ನನ್ನ ಕುಟುಂಬ ಸದಸ್ಯರಿಗೆ ಸಹಾಯ ಮಾಡಲಿಲ್ಲ. ನಮ್ಮನ್ನು ಚೆನ್ನಾಗಿ ನಡೆಸಿಕೊಳ್ಳಲಾಗಿಲ್ಲ. ಹಲವು ವರ್ಷಗಳಿಂದ ಒತ್ತಡದಲ್ಲಿದ್ದೆವು. ಹಲವು ದಿನಗಳಿಂದಲೂ ದೇವರ ಕನಸ್ಸುಗಳು ಬರುತ್ತಲೇ ಇದೆ. ಆದ್ದರಿಂದ ಹಿಂದೂ ಧರ್ಮಕ್ಕೆ ಮರಳಲು ಬಯಸುತ್ತಿದ್ದೇನೆಂದು ಹೇಳಿದ್ದಾರೆ.

ಶಂಕರ್ ಮತ್ತು ಅವರ ಕುಟುಂಬ ಬುಡಗ ಜಂಗಮ ಎಂಬ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹಿಂದೂ ಧರ್ಮಕ್ಕೆ ಮರಳಿರುವ ಹಿನ್ನೆಲೆಯಲ್ಲಿ ಇದೀಗ ಶಂಕರ್ ಹಾಗೂ ಕುಟುಂಬವು ಜಾತಿ ಹೆಸರು ಬದಲಾವಣೆ ಕೋರಿ ಸ್ಥಳೀಯ ಸರಕಾರಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಲಿದ್ದಾರೆ. ಮತಾಂತರಗೊಂಡವರು ಈ ಕುರಿತು ಕೊಪ್ಪಳದ ತಹಶೀಲ್ದಾರ್ ಕಚೇರಿಗೆ ಮಾಹಿತಿ ನೀಡುವುದು ಪ್ರಮುಖವಾಗಿದೆ.

"ನಾನು ಯಾವುದೇ ಒತ್ತಡಕ್ಕೆ ಒಳಗಾಗಿಲ್ಲ ಅಥವಾ ಯಾವುದೇ ಹಿಂದೂ ಸಂಘಟನೆಗಳು ನನ್ನನ್ನು ಸಂಪರ್ಕಿಸಿಲ್ಲ. ನನಗೆ ಬೆದರಿಕೆ ಹಾಕಿದ್ದಕ್ಕಾಗಿ ಮತ್ತು ನಮ್ಮ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪಾದ್ರಿ ಮತ್ತು ಅವರ ಕುಟುಂಬದ ವಿರುದ್ಧ ನಾನು ಪೊಲೀಸ್ ದೂರು ದಾಖಲಿಸಿದ್ದೇನೆ. ದೂರಿನ ನಂತರ, ಪಾದ್ರಿ ಮತ್ತು ಅವರ ಕುಟುಂಬ ಅವರು ತಲೆಮರೆಸಿಕೊಂಡಿದ್ದಾರೆ. ನಂತರ ನಾನು ನನ್ನ ಕುಟುಂಬದ ಒಳಿತಿಗಾಗಿ ಹಿಂದೂ ಧರ್ಮಕ್ಕೆ ಮರಳಲು ನಿರ್ಧರಿಸಿದೆ. ನನಗೆ ಮತ್ತು ನನ್ನ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಅಧಿಕಾರಿಗಳನ್ನು ಕೋರುತ್ತೇನೆ" ಎಂದು ಶಂಕರ್ ಹೇಳಿದ್ದಾರೆ.

"ಅವರ ಇಚ್ಛೆಯಂತೆ, ನಾವು ಸ್ಥಳೀಯ ದೇವಾಲಯದ ಅಧಿಕಾರಿಗಳ ಸಹಾಯದಿಂದ ಧಾರ್ಮಿಕ ಕ್ರಿಯೆಗಳನ್ನು ಆಯೋಜಿಸಿದ್ದೆವು, ಇದಾದ ನಂತರ ಬೇರೆ ಧರ್ಮಕ್ಕೆ ಹಿಂತಿರುಗುವುದಿಲ್ಲ ಎಂದು ಕುಟುಂಬದವರು ಲಿಖಿತ ರೂಪದಲ್ಲಿ ಬರೆದುಕೊಂಡಿದ್ದಾರೆ.

ಸದ್ಯಕ್ಕೆ ಕುಟುಂಬದ ಐವರು ಹಿಂದೂ ಧರ್ಮಕ್ಕೆ ಮರಳಲು ನಿರ್ಧರಿಸಿದ್ದಾರೆ. ಮುಂದಿನ ತಿಂಗಳು ಕುಟುಂಬದ ಇನ್ನೂ ಮೂವರು ಸದಸ್ಯರು ಹಿಂದೂ ಧರ್ಮಕ್ಕೆ ಮರಳಲಿದ್ದಾರೆ ಎಂದು ಕಾರಟಗಿಯ ಹಿಂದೂ ಜಾಗರಣ ವೇದಿಕೆಯ ಸದಸ್ಯರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT