ಸಂಗ್ರಹ ಚಿತ್ರ 
ರಾಜ್ಯ

ಗ್ರಾಮಗಳಲ್ಲಿ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಮುಂದು!

ರಾಜ್ಯದ ಗ್ರಾಮಗಳಲ್ಲಿ ಹಂತ ಹಂತವಾಗಿ ನ್ಯಾಯಾಲಯಗಳ ಸ್ಥಾಪಸಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.

ಬೆಂಗಳೂರು: ರಾಜ್ಯದ ಗ್ರಾಮಗಳಲ್ಲಿ ಹಂತ ಹಂತವಾಗಿ ನ್ಯಾಯಾಲಯಗಳ ಸ್ಥಾಪಸಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.

ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ತೆಗೆದುಕೊಳ್ಳುತ್ತಿರುವ ಕ್ರಮಗಳ ಕುರಿತು ನಿನ್ನೆಯಷ್ಟೇ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳು ಮತ್ತು ಹೈಕೋರ್ಟ್‌ಗಳಿಂದ ಮಾಹಿತಿ ಕೇಳಿತ್ತು.  ನ್ಯಾಯಾಲಯಗಳನ್ನು ಗ್ರಾಮ ಮಟ್ಟಕ್ಕೆ ಕೊಂಡೊಯ್ಯುವುದು ಈ ಉಪಕ್ರಮದ ಉದ್ದೇಶವಾಗಿದೆ.

ಈ ಕುರಿತು ಇತ್ತೀಚೆಗೆ ನಡೆದ ಅಖಿಲ ಭಾರತ ಕಾನೂನು ಸಚಿವರ ಸಭೆಯಲ್ಲಿ ಚರ್ಚೆಗಳು ನಡೆದಿದ್ದು, ರಾಜ್ಯವು ಈ ಉಪಕ್ರಮವನ್ನು ಬೆಂಬಲಿಸಿದೆ ಎಂದು ಕರ್ನಾಟಕ ಕಾನೂನು ಸಚಿವ ಜೆ ಸಿ ಮಾದುಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.

ರಾಜ್ಯಾದ್ಯಂತ ಅಗತ್ಯವಿರುವ ಕಡೆ ಗ್ರಾಮಗಳಲ್ಲಿ ಹಂತ ಹಂತವಾಗಿ ಗ್ರಾಮ ನ್ಯಾಯಾಲಯಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ತಿಳಿಸಿದರು.

ಗ್ರಾಮಗಳಲ್ಲಿ ಸ್ಥಳೀಯವಾಗಿ ಸಮಸ್ಯೆಗಳನ್ನು ಬಗೆಹರಿಸುವ ದಕ್ಷರನ್ನು ಗುರುತಿಸುವ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕವು ನ್ಯಾಯಾಲಯಗಳನ್ನು ಸ್ಥಾಪಿಸಿದ ನಂತರ, ನ್ಯಾಯಾಂಗ ಸೇವೆಯನ್ನು ತಳಮಟ್ಟದವರೆಗೆ ಕೊಂಡೊಯ್ದ ದೇಶದ ಕೆಲವು ರಾಜ್ಯಗಳ ಪಟ್ಟಿಗೆ ಸೇರಲಿದೆ. ಈ ದಿಕ್ಕಿನಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಕೇರಳ, ಮಹಾರಾಷ್ಟ್ರ ಮತ್ತು ಒಡಿಶಾ ರಾಜ್ಯಗಳು ಪ್ರಗತಿ ಸಾಧಿಸಿವೆ ಎಂದು ಮಾಹಿತಿ ನೀಡಿದರು.

ಈ ಪ್ರಸ್ತಾವನೆಯನ್ನು ಕಾರ್ಯಗತಗೊಳಿಸುವ ಮಾರ್ಗಗಳ ಕುರಿತು ಚರ್ಚಿಸಲು ಕರ್ನಾಟಕವು ನ್ಯಾಯಮೂರ್ತಿಗಳಾದ ದಿನೇಶ್ ಕುಮಾರ್, ಪ್ರಭಾಕರ ಶಾಸ್ತ್ರಿ, ಎಸ್.ಅಮರಣ್ಣನವರ್ ಮತ್ತು ಎಸ್.ರಾಚಯ್ಯ ಅವರನ್ನು ಒಳಗೊಂಡ ಹೈಕೋರ್ಟ್ ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ಉದ್ದೇಶಕ್ಕಾಗಿ ಸರ್ಕಾರವೂ 25 ಲಕ್ಷ ರೂಪಾಯಿಯನ್ನು ಮೀಸಲಿಟ್ಟಿದೆ. ಪ್ರತಿ ಹಳ್ಳಿಯಲ್ಲಿ ನ್ಯಾಯಾಂಗ ಅಧಿಕಾರಿಯನ್ನು ನೇಮಿಸುವ ಪ್ರಕ್ರಿಯೆಯು ಇದು ಒಳಗೊಂಡಿರುತ್ತದೆ. ಗ್ರಾಮಗಳಲ್ಲಿ ನ್ಯಾಯಾಲಯಗಳು ಸ್ಥಾಪನೆಗೊಂಡಿಡಿದ್ದೇ ಆದರೆ, ಕಾನೂನು ಸಮಸ್ಯೆಗಳಿಗೆ ಇಲ್ಲಿನ ಜನರು ಜಿಲ್ಲೆಯ ದೊಡ್ಡ ಪೀಠಗಳಿಗೆ ಹೋಗಬೇಕಾಗುವುದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT