ರಾಜ್ಯ

ಖಾಸಗಿ ಸಂಸ್ಥೆಗಳಿಂದ ಮತದಾರರ ಮಾಹಿತಿ ಸಂಗ್ರಹಕ್ಕೆ ಚುನಾವಣಾ ಆಯೋಗ ನಿಷೇಧ

Manjula VN

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಖಾಸಗಿ ಸಂಸ್ಥೆಗಳು ಇನ್ನು ಮುಂದೆ ಮತದಾರರ ಮಾಹಿತಿ ಸಂಗ್ರಹಿಸದಂತೆ ಕ್ರಮ ಕೈಗೊಳ್ಳುವಂತೆ ಭಾರತ ಚುನಾವಣಾ ಆಯೋಗ (ಇಸಿಐ) ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ (ಸಿಇಒ) ಮನೋಜ್ ಕುಮಾರ್ ಮೀನಾ ಅವರು ಈ ಸಂಬಂಧ ಎಲ್ಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಖಾಸಗಿ ಸಂಸ್ಥೆಗಳು ಮನೆ-ಮನೆ ಸಮೀಕ್ಷೆ ಅಥವಾ ನಕಲಿ ಗುರುತಿನ ಚೀಟಿಗಳ ಮೂಲಕ ಮಾಹಿತಿ ಸಂಗ್ರಹಿಸುವ ಯಾವುದೇ ಪ್ರಯತ್ನವನ್ನು ಅನುಮತಿಸಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಯಾವುದೇ ಖಾಸಗಿ ಸಂಸ್ಥೆಗಳಿಗೆ ಡಿಇಒಗಳು ಅಥವಾ ಇಆರ್‌ಒಗಳಿಂದ ದೃಢೀಕರಣ ಅಥವಾ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನೀಡುವ ಮೂಲಕ ಮತದಾರರ ಡೇಟಾ ಸಂಗ್ರಹಣೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೆಲವು ಜಿಲ್ಲೆಗಳಲ್ಲಿ ಕೆಲವು ಖಾಸಗಿ ಸಂಸ್ಥೆಗಲು ಮತದಾರರ ಮನೆಗಳಿಗೆ ತೆರಳಿ ಅರ್ಜಿಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿ ಕೇಳುತ್ತಿರುವ ಬಗ್ಗೆ ದೂರುಗಳು ಬಂದಿವೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ಸಂಸ್ಥೆಗಳು ಮತದಾರರ ಮಾಹಿತಿ ಸಂಗ್ರಹಣ ಮಾಡುವುದರ ಮೇಲೆ ನಿಷೇಧ ಹೇರಲಾಗಿದೆ ಎಂದಿದ್ದಾರೆ.

SCROLL FOR NEXT