ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆಗೊಳಗಾದ ಯುವಕ 
ರಾಜ್ಯ

ಮೂಲ್ಕಿ ಬಳಿ ಅಪ್ರಾಪ್ತ ಬಾಲಕಿ ಜೊತೆ ಯುವಕ ಅಸಭ್ಯ ವರ್ತನೆ: ಕಂಬಕ್ಕೆ ಕಟ್ಟಿಹಾಕಿ ಹಲ್ಲೆ, ಆರೋಪಿಯ ದೂರಿನ ಮೇರೆಗೆ ಕೇಸು

ಮಂಗಳೂರಿನ ಮೂಲ್ಕಿಯ ಕೆರೆಕಾಡು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯನ್ನು ವಶಕ್ಕೆ ಪಡೆದು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿ ಬಂಧಿಸಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿಯ ತಂದೆ ಇತರ ಇಬ್ಬರು ಸೇರಿ ಆರೋಪಿಯನ್ನು ಕಟ್ಟಿಹಾಕಿ ಥಳಿಸಿದ್ದಾರೆ. ಆರೋಪಿಗಳ ದೂರಿನ ಮೇರೆಗೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಂಗಳೂರು: ಮಂಗಳೂರಿನ ಮೂಲ್ಕಿಯ ಕೆರೆಕಾಡು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯನ್ನು ವಶಕ್ಕೆ ಪಡೆದು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿ ಬಂಧಿಸಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿಯ ತಂದೆ ಇತರ ಇಬ್ಬರು ಸೇರಿ ಆರೋಪಿಯನ್ನು ಕಟ್ಟಿಹಾಕಿ ಥಳಿಸಿದ್ದಾರೆ. ಆರೋಪಿಗಳ ದೂರಿನ ಮೇರೆಗೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಯು ಬೈಕ್ ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು ಅಸಭ್ಯವಾಗಿ ವರ್ತಿಸಿದ್ದು ಬಾಲಕಿಯ ತಂದೆಯ ಸ್ನೇಹಿತರಿಬ್ಬರು ಗಮನಿಸಿದ್ದರು. ನಿನ್ನೆ ಶನಿವಾರ ಅದೇ ಪ್ರದೇಶದಲ್ಲಿ ಆರೋಪಿ ಕಂಡುಬಂದ ಹಿನ್ನೆಲೆಯಲ್ಲಿ ಆತನನ್ನು ಕಟ್ಟಿಹಾಕಿ ಹೊಡೆದಿದ್ದಾರೆ. 

ಬಾಲಕಿ ಪೋಷಕರ ದೂರಿನ ಮೇರೆಗೆ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು ಆರೋಪಿ ದೂರಿನ ಮೇರೆಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಗಲಭೆ ಪ್ರಕರಣ ದೂರು ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಬಿ-ಜಿ ರಾಮ್ ಜಿ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

'ಜವಾಬ್ದಾರಿಯಿಂದ ಪ್ರಧಾನಿ ಮೋದಿ ನುಣುಚಿಕೊಂಡರು': ಸಂಸತ್ ಹೊರಗೆ ನರವಾಣೆ ಆತ್ಮಚರಿತ್ರೆ ಪ್ರದರ್ಶಿಸಿದ Rahul Gandhi

ಎಂಜಿನ್‌ನಲ್ಲಿ ಬೆಂಕಿ: ಟರ್ಕಿಶ್ ಏರ್‌ಲೈನ್ಸ್ ವಿಮಾನ ಕೋಲ್ಕತ್ತಾದಲ್ಲಿ ತುರ್ತು ಭೂಸ್ಪರ್ಶ; ತಪ್ಪಿದ ದೊಡ್ಡ ಅನಾಹುತ

ದುಬಾರಿ ಕಾಲೇಜು ಶುಲ್ಕ ಪ್ರಶ್ನಿಸಿ ಪ್ರತಿಭಟನೆ: ವಿದ್ಯಾರ್ಥಿ ನಾಯಕರ ಅಪಹರಣ, ನಟ Mohan Babu ವಿರುದ್ಧ ಪ್ರಕರಣ ದಾಖಲು! ಪೊಲೀಸ್ ಸಿನಿಮೀಯ ಚೇಸ್! Video

ಚುನಾವಣೆಗೂ ಮುನ್ನ SIRಗೆ ಆತುರ ಏಕೆ?: ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ; ಹೊಸ ದಾಖಲೆ; Video

SCROLL FOR NEXT