ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

CBI raid: ಡಿ ಕೆ ಶಿವಕುಮಾರ್‌ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ CBI ದಾಳಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್‌ ಎಜುಕೇಶನ್‌ ಫೌಂಡೇಶನ್‌ ಮೇಲೆ ದಾಳಿ ನಡೆದಿದೆ.

ಡಿಕೆ ಶಿವಕುಮಾರ್
Srinivasa Murthy VN
Updated On : 19 Dec 2022, 3:42 pm

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್‌ ಎಜುಕೇಶನ್‌ ಫೌಂಡೇಶನ್‌ ಮೇಲೆ ದಾಳಿ ನಡೆದಿದೆ.

ಸದ್ಯ ಡಿಕೆ ಶಿವಕುಮಾರ್‌ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗಹಿಸಿದ್ದು, ಇದೇ ಸಂದರ್ಭದಲ್ಲಿ ಇತ್ತ  ಬೆಂಗಳೂರಿನಲ್ಲಿ ಸಿಬಿಐ ದಾಳಿ ನಡೆಸಿದೆ. ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನುವುದು ತಿಳಿದು ಬಂದಿದೆ.

ಇದನ್ನೂ ಓದಿ: ಮುಂದಿನ ವಿಧಾನಸಭಾ ಚುನಾವಣೆಗೆ ಸಜ್ಜಾಗಲು ಕೆಪಿಸಿಸಿ ಚುನಾವಣಾ ಸಮಿತಿ ರಚನೆ; 11 ಹೊಸ ನಾಯಕರ ಸೇರ್ಪಡೆ

Advertisement

Advertisement

ಈ ಹಿಂದೆ ಕೂಡ ಡಿ ಕೆ ಶಿವಕುಮಾರ್‌ ಅವರ ಮನೆ ಮೇಲೆ ಇಡಿ, ಆದಾಯ ತೆರಿಗೆ ಅಧಿಕಾರಿಗಳು, ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಅದಕ್ಕೆ ಸಂಬಂಧಪಟ್ಟಂತೆ ಅವರನ್ನು ಸದ್ಯ ವಿಚಾರಣೆ ನಡೆಸುತ್ತಿದೆ. ಡಿಕೆ ಶಿವಕುಮಾರ್‌ ಅವರು ನ್ಯಾಷನಲ್‌ ಎಜುಕೇಶನ್‌ ಫೌಂಡೇಶನ್‌ ಸಂಸ್ಥೆಯ ಚೇರ್ಮನ್‌ ಆಗಿದ್ದು, ಅವರ ಮಗಳಾದ ಐಶ್ವರ್ಯ ಅವರು ಕಾರ್ಯದರ್ಶಿಯಾಗಿದ್ದಾರೆ. ಇಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ದಾಳಿ ನಡೆದಿದೆ ಎನ್ನಲಾಗಿದೆ.

ದಾಳಿ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, 'ಇಂದು ದಾಳಿ ವೇಳೆಯಲ್ಲಿ ನಮ್ಮ ಟ್ರಸ್ಟಿಗಳನ್ನು ಭೇಟಿ ಮಾಡಿ, ಕೆಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನನ್ನ ವಕೀಲರಿಗೆ ಕೂಡ ನಾನು ನೀಡಿರುವ ಹಣಕ್ಕೆ ಸಂಬಂಧಪಟ್ಟಂತೆ ನೋಟಿಸ್‌ ನೀಡಿದ್ದಾರೆ. ಇದಲ್ಲದೇ ನಮ್ಮ ಊರಿಗೆ ತೆರಳಿ ಅಲ್ಲಿರುವ ಜಮೀನು ಹಾಗೂ ಮನೆಯನ್ನು ಸುತ್ತು ಹಾಕಿ ತಹಶಿಲ್ದಾರ್‌ ಅವರಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ನನ್ನ ವಿರುದ್ದ ಕೇಸ್‌ಗಳು ನಡೆಯುತ್ತಿದ್ದು, ಎಲ್ಲಾ ಕಡೆಯಿಂದ ನನಗೆ ತೊಂದ್ರೆ ನೀಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಚಳಿಗಾಲ ಅಧಿವೇಶನ: ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ಅನಾವರಣ, ಸುವರ್ಣಸೌಧ ಮೆಟ್ಟಿಲುಗಳ ಮೇಲೆ ಧರಣಿಗಿಳಿದ ಕಾಂಗ್ರೆಸ್

ಸಿಬಿಐ ದಾಳಿಯಿಂದ ನನಗೆ ಯಾವುದೇ ಭಯವಿಲ್ಲ, ನಾನು ತಪ್ಪು ಮಾಡಿಲ್ಲ. ಹೆಚ್‌ ವಿಶ್ವನಾಥ್‌ ಬಗ್ಗೆ ಇತ್ತೀಚಿಗೆ ಹಣಕಾಸಿನ ಬಗ್ಗೆ ರಾಜರೋಷವಾಗಿ ಹೇಳಿದ್ದರು ಕೂಡ ಯಾರು ಈ ಬಗ್ಗೆ ಮಾತನಾಡಿಲ್ಲ. ಇದಲ್ಲದೇ ವಿರೋಧಿಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಬಿಜೆಪಿ ಮುಂದಾಗಿದ್ದು, ಈ ಬಗ್ಗೆ ನ್ಯಾಯಾಲಯ ಜನತೆಗಳ ಜೊತೆಗೆ ನಾವು ಹೋಗುತ್ತೆವೆ ಎಂದು ಹೇಳಿದರು.

ಎರಡು ದಿನಗಳ ಹಿಂದೆ ಮಾಧ್ಯಮಗಳ ಜೊತೆಗೆ ಕೊಪ್ಪಳದಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್, ಚುನಾವಣೆ ಹಿನ್ನಲೆಯಲ್ಲಿ ನನಗೆ ಸೇರಿದಂಥ ಹಲವರಿಗೆ ಸಿಬಿಐ ತೊಂದರೆ ಕೊಡುತ್ತಿದೆ ಎಂದು ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement