ಬೆಳಗಾವಿ ಸುವರ್ಣ ವಿಧಾನಸೌಧ 
ರಾಜ್ಯ

ಬೆಳಗಾವಿ ಅಧಿವೇಶನ: ನಾಳೆ ವಿಧಾನಸಭೆಯಲ್ಲಿ ಎಸ್​​ಸಿ,ಎಸ್​​ಟಿ ಮೀಸಲಾತಿ ಹೆಚ್ಚಳ ವಿಧೇಯಕ ಸೇರಿ 4 ಮಸೂದೆ ಮಂಡನೆ

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯ್ತು. ಎರಡನೇ ದಿನವಾದ ಮಂಗಳವಾರ ವಿಧಾನಸಭೆಯಲ್ಲಿ ಎಸ್​​ಸಿ, ಎಸ್​​ಟಿ ಸಮುದಾಯದ...

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯ್ತು. ಎರಡನೇ ದಿನವಾದ ಮಂಗಳವಾರ ವಿಧಾನಸಭೆಯಲ್ಲಿ ಎಸ್​​ಸಿ, ಎಸ್​​ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಹಾಗೂ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ವಿಧೇಯಕ ಸೇರಿ ನಾಲ್ಕು ಮಸೂದೆ ಮಂಡನೆಯಾಗಲಿವೆ.

ಆಡಳಿತರೂಢ ಬಿಜೆಪಿ ಸರ್ಕಾರ ಕೆಲವೇ ತಿಂಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಸ್​​ಸಿ, ಎಸ್​​ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಮಂಡನೆಗೆ ಮುಂದಾಗಿದೆ. 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ನಿರ್ಧಾರವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಈ ಹಿಂದಿನ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.

ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಡಗಳ ಮೀಸಲಾತಿ ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿದೆ. ಆದರೆ ಕೇವಲ ಸರ್ಕಾರಿ ಆದೇಶದ ಮೂಲಕ ಮೀಸಲಾತಿ ಹೆಚ್ಚಿಸಿದರೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಮಸೂದೆಯೊಂದನ್ನು ರೂಪಿಸಿ, ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ. ಬಳಿಕ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲಾಗಿದೆ. ಆರು ತಿಂಗಳೊಳಗೆ ತಿದ್ದುಪಡಿ ಮಸೂದೆಗೆ ವಿಧಾನ ಮಂಡಲದ ಒಪ್ಪಿಗೆ ಪಡೆಯಬೇಕು. ನಂತರ ಸಂವಿಧಾನದ ಒಂಭತ್ತನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂಬ ಸಲಹೆಯನ್ನು ನಾಗಮೋಹನ್ ದಾಸ್ ಅವರು ವರದಿ ನೀಡಿದ್ದರು. ಅದರ ಅನ್ವಯ ನಾಳಿನ ಅಧಿವೇಶನದಲ್ಲಿ ಎಸ್​​ಸಿ, ಎಸ್​​ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಮಂಡನೆ ಮಾಡಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT