ರಾಜ್ಯ

ನೇಕಾರರ ಉತ್ಪನ್ನಗಳಿಗೆ ಅಂತರರಾಷ್ಟ್ರೀಯ ಬ್ರ್ಯಾಂಡಿಂಗ್ ಗೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Srinivas Rao BV

ಬೆಳಗಾವಿ: ಇಳಕಲ್ ಸೀರೆ ಸೇರಿದಂತೆ ನೇಕಾರರ ಉತ್ಪನ್ನಗಳಿಗೆ ಅಂತರಾಷ್ಟ್ರೀಯ ಬ್ರ್ಯಾಂಡಿಂಗ್ ದೊರೆತಾಗ ಉತ್ಪಾದನೆ ಹಾಗೂ ಆರ್ಥಿಕತೆ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸರ್ಕಾರವು ನೇಕಾರರ ಬೇಡಿಕೆಗಳನ್ನು ಈಡೇರಿಸಿರುವ ಸಲುವಾಗಿ ನೇಕಾರ‌ರಿಂದ ಸುವರ್ಣ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ‌ಬಸವರಾಜ ಬೊಮ್ಮಾಯಿ ಅವರು ವಿಶೇಷ   ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.

ಮುಂಬರುವ ದಿನಗಳಲ್ಲಿ ಜವಳಿ ನೀತಿಯಲ್ಲಿ ಸಾಕಷ್ಟು ಬದಲಾವಣೆ ತರಲಾಗುವುದು. ಅತಿಹೆಚ್ಚು ಜವಳಿ ರಫ್ತು ಮಾಡುವ ರಾಜ್ಯ ಕರ್ನಾಟಕವಾಗಿದೆ. ಇಳಕಲ್ ಸೇರೆ ಸಾಕಷ್ಟು ಪ್ರಸಿದ್ದಿ ಹೊಂದಿದೆ. ಈ ಸೀರೆಗಳು ರಾಷ್ಟ್ರಮಟ್ಟಕ್ಕೆ ಬ್ರ್ಯಾಂಡಿಂಗ್ ಆಗಬೇಕು. ಅದಕ್ಕಾಗಿ ಅಮೇಜಾನ್ ನಂತಹ ಆನ್ ಲೈನ್ ವೇದಿಕೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದರು.

ಪವರ್ ಲೂಮ್ ನೇಕಾರರಿಗೆ ನೇಕಾರ ಸಮ್ಮಾನ್ ಯೋಜನೆ:

ನೇಕಾರ ಸಮ್ಮಾನ ಯೋಜನೆಯನ್ನು ವಿದ್ಯುತ್ ಕೈಮಗ್ಗದಲ್ಲಿ ಕೆಲಸ ಮಾಡುವ ನೇಕಾರರಿಗೂ ವಿಸ್ತರಿಸಲಾಗಿದೆ. ಜನವರಿ 14 ರಂದು ನೇಕಾರರಿಗೆ ಸಂಕ್ರಾಂತಿ ಹಬ್ಬದ ಕಾಣಿಕೆಯಾಗಿ  ನೀಡಲಾಗುವುದು. ವೃತ್ತಿಪರ ನೇಕಾರ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ. 30 ರ ಸಹಾಯಧನವನ್ನು ಶೇ. 50 ಕ್ಕೆ ಹೆಚ್ಚಿಸಲಾಗಿದೆನೇಕಾರರ ಕಾಲೋನಿಗಳಲ್ಲಿ ವಾಸಿಸುವವರಿಗೆ ರಹವಾಸಿ ಪತ್ರಗಳನ್ನು  ನೀಡಲು ತೀರ್ಮಾನಿಸಲಾಗಿದೆ ಎಂದರು.

ನೇಕಾರರಿಂದ ಸಮವಸ್ತ್ರ ಖರೀದಿ:
ಮನೆಯಲ್ಲಿ ನೇಕಾರಿಕೆ ಮಾಡುವುದನ್ನು ಗುಡಿಕೈಗಾರಿಕೆ ಎಂದು ಪರಿಗಣಿಸಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿನಾಯ್ತಿ ಮಾಡಲಾಗಿದೆ. ನೇಕಾರರ ಉತ್ಪನ್ನಗಳು ಶಿಕ್ಷಣ ಇಲಾಖೆಯ ವಿದ್ಯಾವಿಕಾಸ ಯೋಜನೆಯಡಿಯಲ್ಲಿ ಖರೀದಿಸಲಾಗುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ನೀಡಲಾಗುವ ಸಮವಸ್ತ್ರಗಳ ತಯಾರಿಕೆಗೆ ಡಿಸೆಂಬರ್ ನಲ್ಲಿಯೇ ಆದೇಶ ನೀಡಲಾಗುವುದು. ಸರ್ಕಾರ ನೇಕಾರ ನಿಗಮಗಳ ಉತ್ಪಾದನಾ ಸಾಮರ್ಥ್ಯದ ಅನುಗುಣವಾಗಿ ಸಮವಸ್ತ್ರ ಪೂರೈಕೆ ಪ್ರಮಾಣ ನಿಗದಿಪಡಿಸಿ, ಉಳಿದ ಪ್ರಮಾಣಕ್ಕೆ ಟೆಂಡರ್ ಕರೆಯಲಾಗುವುದು. ವಿವಿಧ ಇಲಾಖೆಗಳ ಸಮವಸ್ತ್ರದ ಅಗತ್ಯತೆಯ ಶೇ. 25 ರಷ್ಟನ್ನು ಕೈಮಗ್ಗ ನಿಗಮದ ಮೂಲಕ ಖರೀದಿಸಲು ತೀರ್ಮಾನಿಸಲಾಗಿದೆ ಎಂದರು.

SCROLL FOR NEXT