ಸಂಗ್ರಹ ಚಿತ್ರ 
ರಾಜ್ಯ

ಇ-ಬೈಕ್ ಟ್ಯಾಕ್ಸಿಗೆ ಸರ್ಕಾರ ಗ್ರೀನ್ ಸಿಗ್ನಲ್: ಶೀಘ್ರದಲ್ಲೇ ನಗರದ ರಸ್ತೆಗಳಲ್ಲಿ ಸಂಚಾರ

ಇ-ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಶೀಘ್ರದಲ್ಲೇ ಬೆಂಗಳೂರಿನ ರಸ್ತೆಗಳಲ್ಲಿ ಸಂಚರಿಸಲಿವೆ.

ಬೆಂಗಳೂರು: ಇ-ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಶೀಘ್ರದಲ್ಲೇ ಬೆಂಗಳೂರಿನ ರಸ್ತೆಗಳಲ್ಲಿ ಸಂಚರಿಸಲಿವೆ.

ಸಾರಿಗೆ ಇಲಾಖೆಯು ವಿಕೆಡ್ ರೈಡ್, ಬೌನ್ಸ್‌ ಎಂಬ ಖಾಸಗಿ ಸಂಸ್ಥೆಗೆ ಪರವಾನಗಿ ನೀಡಿದ್ದು, ಅಧಿಕೃತವಾಗಿ ಬೈಕ್ ಟ್ಯಾಕ್ಸಿಗಳು ಶೀಘ್ರದಲ್ಲೇ ರಸ್ತೆಗೆ ಇಳಿಯಲಿವೆ.

ನಿಯಮದ ಪ್ರಕಾರ, GPS-ಸಕ್ರಿಯಗೊಳಿಸಿದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳು ಮೊದಲ 5 ಕಿಲೋ ಮೀಟರ್ ಗೆ ದರ ರೂ.25 ನಂತರದ 10 ಕಿ. ಮೀ ಪ್ರಯಾಣಕ್ಕೆ ರೂ.50 ದರ ವಿಧಿಸಬೇಕಿದೆ. ಸವಾರ ಮತ್ತು ಹಿಂಬದಿ ಸವಾರ ಇಬ್ಬರೂ ಹಳದಿ ಹೆಲ್ಮೆಟ್ ಧರಿಸಿರಬೇಕು, ಇ-ಬೈಕ್ ಟ್ಯಾಕ್ಸಿ ಚಾಲನೆಗೆ 5 ವರ್ಷದ ಪರವಾನಗಿಯನ್ನು ರೂ.5 ಸಾವಿರ ಭದ್ರತಾ ಠೇವಣಿ ಪಡೆದು ನೀಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ-2021 ರ ಅಡಿಯಲ್ಲಿ ಬೆಂಗಳೂರಿನಲ್ಲಿ 100 ಇ-ಬೈಕ್ ಟ್ಯಾಕ್ಸಿಗಳನ್ನು ನಿರ್ವಹಿಸಲು ನಾವು ಡಿಸೆಂಬರ್ 16 ರಂದು ವಿಕೆಟ್ ರೈಡ್‌ಗೆ ಅನುಮತಿ ನೀಡಿದ್ದೇವೆ. ಮುಂದಿನ 5 ವರ್ಷಗಳ ಅವಧಿಗೆ ಪರವಾನಗಿ ಮಾನ್ಯವಾಗಿರುತ್ತದೆ. 5 ಕಿ.ಮೀ.ಗೆ 25 ರೂ., 10 ಕಿ.ಮೀ.ಗೆ 50 ರೂ. ದರ ನಿಗದಿ ಮಾಡಿದ್ದೇವೆ. ಪ್ರಯಾಣದ ಮೂಲ ಮತ್ತು ಗಮ್ಯಸ್ಥಾನದ ನಡುವಿನ ಅಂತರವು 10 ಕಿಮೀ ಮೀರಬಾರದು ಎಂದು ಸಾರಿಗೆ ಹೆಚ್ಚುವರಿ ಆಯುಕ್ತ ಹಾಗೂ ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಎಲ್ ಹೇಮಂತ ಕುಮಾರ್ ತಿಳಿಸಿದ್ದಾರೆ.

ನಗರ ಚಲನಶೀಲತೆಯನ್ನು ಬಲಪಡಿಸಲು ಕಳೆದ ವರ್ಷ ಜುಲೈನಲ್ಲಿ ರಾಜ್ಯ ಸರ್ಕಾರವು ಇ-ಬೈಕ್ ಟ್ಯಾಕ್ಸಿ ನೀತಿಯನ್ನು ಜಾರಿಗೆ ತಂದಿತ್ತು. ಸಾರ್ವಜನಿಕ ಸಾರಿಗೆಯನ್ನು, ವಿಶೇಷವಾಗಿ ಮೆಟ್ರೋವನ್ನು ಪ್ರವೇಶಿಸಲು ಜನರಿಗೆ ಇ-ಬೈಕ್ ಪರಿಹಾರವಾಗಿ ಕಾರ್ಯನಿರ್ವಹಿಸುತ್ತದೆ.

ದ್ವಿಚಕ್ರ ವಾಹನದ ಎರಡೂ ಬದಿಗಳಲ್ಲಿ ‘ಬೈಕ್ ಟ್ಯಾಕ್ಸಿ’ಗೆ ಪ್ರಮುಖವಾಗಿ ಬಣ್ಣ ಬಳಿಯಬೇಕು ಎಂದು ಪರವಾನಗಿಯಲ್ಲಿ ಸೂಚಿಸಲಾಗಿದೆ. ಚಾಲಕನು 'ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ' ಎಂದು ಗುರುತಿಸಲಾದ ಪ್ರತಿಫಲಿತ ವೆಸ್ಟ್ ಮತ್ತು ಹಳದಿ ಹೆಲ್ಮೆಟ್ ಅನ್ನು ಧರಿಸಬೇಕು. ನಿರ್ವಾಹಕರು ಗ್ರಾಹಕರಿಗೆ ಹೆಚ್ಚುವರಿ ಹೆಲ್ಮೆಟ್ ನೀಡಬೇಕಾಗುತ್ತದೆ. 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಗ್ರಾಹಕರು ಇ-ಬೈಕ್‌ಗಳನ್ನು ಬಾಡಿಗೆಗೆ ಪಡೆಯಬಹುದು, ಇ-ಬೈಕ್‌ಗಳು ಬೈಕ್ ಟ್ಯಾಕ್ಸಿಗಳಾಗಿ ಕಾರ್ಯನಿರ್ವಹಿಸಲು ಮಾತ್ರ ಪರವಾನಗಿ ನೀಡಲಾಗಿದೆ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರು ಈ ಕ್ರಮವನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಇದು ನಮ್ಮ ಜೀವನೋಪಾಯಕ್ಕೆ ತೀವ್ರ ಹೊಡೆತವನ್ನು ನೀಡುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾವು ಈಗಾಗಲೇ ದೈನಂದಿನ ಆದಾಯದಲ್ಲಿ ಕುಸಿತವನ್ನು ಎದುರಿಸುತ್ತಿದ್ದೇವೆ ಮತ್ತು ಇ-ಬೈಕ್ ಟ್ಯಾಕ್ಸಿಗಳು ನಿಜವಾಗಿದ್ದರೆ ನಮ್ಮ ಚಾಲಕರು ಆತ್ಮಹತ್ಯೆಯ ಹಾದಿಯನ್ನು ಹಿಡಿಯಬೇಕಾಗುತ್ತದೆ. ಹೆಚ್ಚು ತೊಂದರೆಗೊಳಗಾಗಿರುವವರನ್ನು ಸಂಪರ್ಕಿಸದೆ ಇಲಾಖೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ’ ಎಂದು ಆಟೋ ಮತ್ತು ಕ್ಯಾಬ್ ಚಾಲಕರ ಒಕ್ಕೂಟದ ಪ್ರತಿನಿಧಿಗಳು ಹೇಳಿದ್ದಾರೆ.

ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಒಕ್ಕೂಟದ ಅಧ್ಯಕ್ಷ ಎಂ ಮಂಜುನಾಥ್ ಅವರು ಮಾತನಾಡಿ, ಕೋವಿಡ್ ಲಾಕ್‌ಡೌನ್‌ಗಳ ಸಮಯದಲ್ಲಿ ಉಂಟಾದ ನಷ್ಟದಿಂದ ಇನ್ನೂ ಚೇತರಿಸಿಕೊಂಡಿಲ್ಲ. "ಚಾಲಕರು ಇಂತಹ ಸಂಕಷ್ಟಕ್ಕೆ ಸಿಲುಕಿದರೆ, ಕೆಲವರು ಆತ್ಮಹತ್ಯೆ ಮಾಡಿಕೊಂಡರೂ ಆಶ್ಚರ್ಯವಿಲ್ಲ. ಈ ಸಂಬಂಧ ಶೀಘ್ರದಲ್ಲಿಯೇ ಎಲ್ಲಾ ಸಂಘಗಳ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್