ಸುನೀಲ್ ಕುಮಾರ್ 
ರಾಜ್ಯ

ಕೆಪಿಟಿಸಿಎಲ್ ಎಇ,ಜೆಇ ನೇಮಕ ಪರೀಕ್ಷೆ; ಜನೆವರಿ ಮೊದಲ ವಾರದಲ್ಲಿ ಫಲಿತಾಂಶ: ಸಚಿವ ಸುನೀಲ್ ಕುಮಾರ್ 

ಕೆಪಿಟಿಸಿಎಲ್ ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್‌ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನೆವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ವಿಧಾನಸಭೆಗೆ ಇಂದು ತಿಳಿಸಿದರು. 

ಬೆಳಗಾವಿ ಸುವರ್ಣಸೌಧ: ಕೆಪಿಟಿಸಿಎಲ್ ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್‌ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನೆವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ವಿಧಾನಸಭೆಗೆ ಇಂದು ತಿಳಿಸಿದರು. 

ಶೂನ್ಯವೇಳೆಯಲ್ಲಿ ಶಾಸಕ ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಾರದೊಳಗೆ ಕೀ ಉತ್ತರಗಳನ್ನು ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ 5 ತಿಂಗಳ ಹಿಂದೆಯೇ ಪರೀಕ್ಷೆ ನಡೆಸಲಾಗಿದ್ದು, ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿರುವುದು ಗಮನಕ್ಕಿದ್ದು, ಈ ಕುರಿತು ಕೆಇಎ ಜೊತೆಗೆ ಫಾಲೋಅಫ್ ಮಾಡುತ್ತಿದ್ದೇವೆ. ಈ ವಾರದಲ್ಲಿ ಅಥವಾ ಅಧಿವೇಶನ ಮುಗಿಯುವುದರೊಳಗೆ ಕೀ ಉತ್ತರಗಳನ್ನು ಪ್ರಕಟಿಸಿ,ಜನೆವರಿ ಮೊದಲ ವಾರದೊಳಗೆ ಫಲಿತಾಂಶ ಪ್ರಕಟಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಶಾಸಕ ಸುರೇಶಕುಮಾರ್ ಅವರು ಪರೀಕ್ಷೆ ಬರೆದು ಐದು ತಿಂಗಳಾದರೂ ಫಲಿತಾಂಶ ಪ್ರಕಟವಾಗಿಲ್ಲ;ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬುದರ ಕುರಿತು ಚಾತಕ ಪಕ್ಷಿಯಂತೆ ಕಾಯುತ್ತಿದ್ದು,ಕೂಡಲೇ ಕ್ರಮವಹಿಸುವಂತೆ ಅವರು ಸಚಿವರಲ್ಲಿ ಕೋರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!