ರಾಜ್ಯ

ಎಲೆಕ್ಟ್ರಿಕ್ ಬಸ್ ಸೇವೆ ಆರಂಭಿಸಲು ಮೂಲಭೂತ ಸೌಕರ್ಯಗಳ ಹೆಚ್ಚಿಸಿದ ಕೆಎಸ್‌ಆರ್‌ಟಿಸಿ

Manjula VN

ಬೆಂಗಳೂರು: ರಾಜ್ಯದಲ್ಲಿ ಇ-ಬಸ್‌ ಸೇವೆಗಳ ಆರಂಭಿಸಲು ಮುಂದಾಗಿರುವ ಕೆಎಸ್‌ಆರ್‌ಟಿಸಿ, ಇದಕ್ಕಾಗಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ಪ್ರಯತ್ನಗಳನ್ನು ಮಾಡುತ್ತಿದೆ.

ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ವಿರಾಜಪೇಟೆ, ಮಡಿಕೇರಿ, ದಾವಣಗೆರೆ, ಶಿವಮೊಗ್ಗ ಮತ್ತು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ (ಮೆಜೆಸ್ಟಿಕ್) ಸೌಲಭ್ಯಗಳನ್ನು ಹೆಚ್ಚಿಸಲು ಕೆಎಸ್‌ಆರ್‌ಟಿಸಿ ಒತ್ತು ನೀಡಿದೆ. ಮೊದಲ ಇ-ಬಸ್ ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿದೆ.

ಯೋಜನೆಯ 1ನೇ ಹಂತದ ಅಡಿಯಲ್ಲಿ ರಾಜ್ಯ ರಾಜಧಾನಿ ಮತ್ತು ಮಡಿಕೇರಿ, ವಿರಾಜಪೇಟೆ, ಚಿಕ್ಕಮಗಳೂರು, ದಾವಣಗೆರೆ ಮತ್ತು ಶಿವಮೊಗ್ಗ ನಡುವೆಯೂ ಬಸ್‌ಗಳು ಸಂಚರಿಸಲಿವೆ ಎಂದು ರಸ್ತೆ ನಿಗಮ ತಿಳಿಸಿದೆ.

“ಸಾಂಕ್ರಾಮಿಕ ರೋಗದಿಂದಾಗಿ, ಹೆಚ್ಚಿನ ಬಸ್‌ಗಳನ್ನು ಸೇರಿಸಲು ಸಾಧ್ಯವಾಗಲಿಲ್ಲ. ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ವಾಹನಗಳ ವೇಗದ ಅಡಾಪ್ಷನ್ ಮತ್ತು ಮ್ಯಾನುಫ್ಯಾಕ್ಚರಿಂಗ್ ಯೋಜನೆಯಡಿ ನಾವು 50 ಎಲೆಕ್ಟ್ರಿಕ್ ಬಸ್‌ಗಳಿಗೆ ಆರ್ಡರ್ ಮಾಡಿದ್ದೇವೆ.

ಮೊದಲ ಬಸ್ ಶೀಘ್ರದಲ್ಲೇ ನಮಗೆ ತಲುಪುವ ನಿರೀಕ್ಷೆಯಿದೆ. ಡಿಸೆಂಬರ್ ಅಂತ್ಯದ ವೇಳೆಗೆ ನಾವು ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತೇವೆ. ಎಲೆಕ್ಟ್ರಿಕ್ ಬಸ್‌ಗಳನ್ನು ಹಂತಹಂತವಾಗಿ ತಲುಪಿಸಲಾಗುತ್ತಿದೆ ಮತ್ತು ಪ್ರತಿ ಎರಡು ತಿಂಗಳಿಗೊಮ್ಮೆ 10 ಬಸ್‌ಗಳು ರಾಜ್ಯಕ್ಕೆ ಬರಲಿವೆ ಎಂದು ಕೆಎಸ್‌ಆರ್‌ಟಿಸಿ ಎಂಡಿ ಅನ್ಬು ಕುಮಾರ್ ಹೇಳಿದ್ದಾರೆ.

"ಮೆಜೆಸ್ಟಿಕ್, ಮೈಸೂರು ಮತ್ತು ವಿರಾಜಪೇಟೆ ಬಸ್ ನಿಲ್ದಾಣಗಳಲ್ಲಿ ಚಾರ್ಜಿಂಗ್ ಸ್ಟೇಷನ್‌ಗಳು ನಿರ್ಮಾಣ ಹಂತದಲ್ಲಿವೆ. ಮಡಿಕೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಡಿಪೋಗಳಲ್ಲೂ ಕಾಮಗಾರಿ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

SCROLL FOR NEXT