ಬೋನಿಗೆ ಬಿದ್ದ ಹುಲಿ 
ರಾಜ್ಯ

ಜೊಯಿಡಾ: ಕೊನೆಗೂ ಬೋನಿಗೆ ಬಿದ್ದ ಆತಂಕ ಸೃಷ್ಟಿಸಿದ ಹುಲಿ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನಲ್ಲಿ ಜಾನುವಾರುಗಳನ್ನು ಬಲಿ ಪಡೆದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಹುಲಿಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅದಿಕಾರಿಗಳು ಯಶಸ್ವಿಯಾಗಿದ್ದಾರೆ.

ಜೊಯಿಡಾ: ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನಲ್ಲಿ ಜಾನುವಾರುಗಳನ್ನು ಬಲಿ ಪಡೆದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಹುಲಿಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅದಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಲಿಯನ್ನು ಮೃಗಾಲಯಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಕಳ್ನೆ ಎಂಬಲ್ಲಿ ದನದ ಕೊಟ್ಟಿಗೆಯಲ್ಲಿ ಇಡಲಾಗಿದ್ದ ಬೋನಿನಲ್ಲಿ ಭಾನುವಾರ ರಾತ್ರಿ ಹುಲಿ ಸೆರೆಯಾಗಿದೆ. ಜೊಯಿಡಾ ತಾಲೂಕಿನ ಉಳವಿ ಗ್ರಾಮದ ಜನರು ಈ ಬೆಳವಣಿಗೆಯಿಂದ ನಿಟ್ಟುಸಿರು ಬಿಟ್ಟಿದ್ದು, ಹುಲಿಯನ್ನು ಹಿಡಿಯಲು ಅರಣ್ಯ ಇಲಾಖೆ ನಡೆಸಿದ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.

ಒಂದು ವಾರದಲ್ಲಿ 10 ಜಾನುವಾರುಗಳನ್ನು ಕೊಂದಿದ್ದರಿಂದ ಇಡೀ ಪ್ರದೇಶದಲ್ಲಿ ಭಯ ಆವರಿಸಿತ್ತು. ಹುಲಿಯು ಪ್ರತಿದಿನ ಜನವಸತಿ ಪ್ರದೇಶಕ್ಕೆ ಬಂದು ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು. ಈ ವೇಳೆ ಒಂದು ಅಥವಾ ಎರಡು ಹಸುಗಳು ಅಥವಾ ಕರುಗಳನ್ನು ಕೊಂದು ಕಾಡಿಗೆ ಎಳೆದೊಯ್ಯುತ್ತಿತ್ತು.

ಚಂದ್ರಾಳಿ, ಹೆನಕೋಳದಲ್ಲಿ ಮೂರು ಹಸುಗಳು ಹಾಗೂ ಮೆಳೆ ಪ್ರದೇಶದಲ್ಲಿ ಎರಡು ಎತ್ತುಗಳ ಮೇಲೆ ದಾಳಿ ಮಾಡಿದೆ. ಹುಲಿಗೆ ವಯಸ್ಸಾಗಿರುವುದರಿಂದ ಮನೆಗಳಿಗೆ ಹೊಂದಿಕೊಂಡಿರುವ ಕೊಟ್ಟಿಗೆಯಲ್ಲಿ ಸಾಕಿದ ಜಾನುವಾರುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹುಲಿಯ ದಾಳಿಯಿಂದ ಭಯಭೀತರಾಗಿದ್ದ ಗ್ರಾಮಸ್ಥರು ಯಾವಾಗ ಬೇಕಾದರೂ ನರಭಕ್ಷಕವಾಗಿ ಬದಲಾಗಬಹುದಾದ ಹುಲಿಯನ್ನು ಹಿಡಿಯಲು ಸಾಧ್ಯವಾಗುತ್ತಿಲ್ಲ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್‌ ಶಾಸಕ, ಹಿರಿಯ ರಾಜಕಾರಣಿ ಆರ್‌.ವಿ. ದೇಶಪಾಂಡೆ ಅವರನ್ನು ಒತ್ತಾಯಿಸಿದ್ದರು.

ಕಾಳಿ ಮೀಸಲು ಅರಣ್ಯ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಾರಿಯೋ ಕ್ರಿಸ್ತರಾಜ ನೇತೃತ್ವದ ತಂಡ ಹುಲಿ ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದರು. ಅಂತಿಮವಾಗಿ ಹುಲಿಯು ಬೋನಿಗೆ ಬಿದ್ದಿದೆ. ಉಳುವಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಂಜುನಾಥ ಮೊಕಾಶಿ ಅವರು ಈ ಭಾಗದ ಜನರಿಗೆ ಸಹಾಯ ಮಾಡಿದ ಅರಣ್ಯಾಧಿಕಾರಿಗಳನ್ನು ಅಭಿನಂದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT