ವಿಶೇಷ ಆಯುಕ್ತ (ಸಂಚಾರ) ಎಂ.ಎ.ಸಲೀಂ. 
ರಾಜ್ಯ

ಬೆಂಗಳೂರು: ವಾರಾಂತ್ಯದಲ್ಲಿ ದಿಢೀರ್ ಭೇಟಿ ನೀಡಿ ಸಂಚಾರ ಪರಿಸ್ಥಿತಿ ಪರಿಶೀಲಿಸಲು ವಿಶೇಷ ಆಯುಕ್ತರು ಮುಂದು!

ಟ್ರಾಫಿಕ್ ಜಾಮ್‌ಗೆ ಕಾರಣವಾಗುವ ರಸ್ತೆಗಳಲ್ಲಿ ಯಾವುದೇ ವಾಹನಗಳನ್ನು ನಿಲುಗಡೆ ಮಾಡದಂತೆ ಅಥವಾ ಅಡ್ಡಾದಿಡ್ಡಿಯಾಗಿ ನಿಲ್ಲಿಸದಂತೆ ಸಂಚಾರ ಪೊಲೀಸರಿಗೆ ವಿಶೇಷ ಸೂಚನೆ ನೀಡಿರುವ ವಿಶೇಷ ಆಯುಕ್ತ ಸಲೀಂ ಅವರು, ಸಂಚಾರ ಪರಿಸ್ಥಿತಿ ಪರಿಶೀಲಿಸಲು ವಾರಾಂತ್ಯದಲ್ಲಿ ಅನಿರೀಕ್ಷಿತ ಭೇಟಿ ನೀಡಲು ಮುಂದಾಗಿದ್ದಾರೆ.

ಬೆಂಗಳೂರು: ಟ್ರಾಫಿಕ್ ಜಾಮ್‌ಗೆ ಕಾರಣವಾಗುವ ರಸ್ತೆಗಳಲ್ಲಿ ಯಾವುದೇ ವಾಹನಗಳನ್ನು ನಿಲುಗಡೆ ಮಾಡದಂತೆ ಅಥವಾ ಅಡ್ಡಾದಿಡ್ಡಿಯಾಗಿ ನಿಲ್ಲಿಸದಂತೆ ಸಂಚಾರ ಪೊಲೀಸರಿಗೆ ವಿಶೇಷ ಸೂಚನೆ ನೀಡಿರುವ ವಿಶೇಷ ಆಯುಕ್ತ ಸಲೀಂ ಅವರು, ಸಂಚಾರ ಪರಿಸ್ಥಿತಿ ಪರಿಶೀಲಿಸಲು ವಾರಾಂತ್ಯದಲ್ಲಿ ಅನಿರೀಕ್ಷಿತ ಭೇಟಿ ನೀಡಲು ಮುಂದಾಗಿದ್ದಾರೆ.

ಕಮರ್ಷಿಯಲ್ ಸ್ಟ್ರೀಟ್, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ರೆಸಿಡೆನ್ಸಿ ರಸ್ತೆ, ಮೆಜೆಸ್ಟಿಕ್, ಎಂ.ಜಿ.ರಸ್ತೆ ಮತ್ತು ಕೋರಮಂಗಲದಂತಹ ವಾಣಿಜ್ಯ ಕೇಂದ್ರಗಳಿಗೆ ವಾರಾಂತ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವುದರಿಂದ, ವಾರಾಂತ್ಯದ ದಿನಗಳಲ್ಲಿ ಈ ಪ್ರದೇಶಗಳಿಗೆ ದಿಢೀರ್ ಭೇಟಿ ನೀಡಿ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಸಲೀಂ ಅವರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

“ವಾರಾಂತ್ಯದಲ್ಲಿ, ಎಲ್ಲರೂ ಶಾಪಿಂಗ್ ಮತ್ತು ಇತರ ಉದ್ದೇಶಗಳಿಗಾಗಿ ಪ್ರಮುಖ ಪ್ರದೇಶಗಳಿಗೆ ಆಗಮಿಸುತ್ತಾರೆ. ಈ ಸಂದರ್ಭದಲ್ಲಿ ಗಮನಹರಿಸಿದರೆ ಸುಗಮ ಸಂಚಾರ ಸಾಧ್ಯವಾಗುತ್ತದೆ. ಕಬ್ಬನ್ ಪಾರ್ಕ್, ಹಲಸೂರು, ಕಮರ್ಷಿಯಲ್ ಸ್ಟ್ರೀಟ್, ಅಶೋಕ್ ನಗರ, ಉಪ್ಪಾರಪೇಟೆ ಮತ್ತು ಆಡುಗೋಡಿ ಸಂಚಾರ ಠಾಣೆಗಳಿಗೆ ನೋ ಪಾರ್ಕಿಂಗ್ ಪ್ರದೇಶಗಳಲ್ಲಿ ವಾಹನ ನಿಲುಗಡೆ ಮಾಡದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ವಾಣಿಜ್ಯ ಕೇಂದ್ರಗಳಲ್ಲಿ ವಾಹನಗಳನ್ನು ನಿಲ್ಲಿಸಲು ಅವಕಾಶ ನೀಡಬಾರದು ಏಕೆಂದರೆ ಇದು ಟ್ರಾಫಿಕ್ ಜಾಮ್ಗೆ ಕಾರಣವಾಗಲಿದೆ ಎಂದು ಹೇಳಿದ್ದಾರೆ.

ವಾರಾಂತ್ಯದಲ್ಲಿ ರೆಸಿಡೆನ್ಸಿ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಸಂಚಾರ ಸುಗಮಗೊಳಿಸಲು ಆಯುಕ್ತರ ಸೂಚನೆಗಳನ್ನು ನೆರವಾಗಿವೆ ಎಂದು ಅಶೋಕ್ ನಗರ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ರೆಸಿಡೆನ್ಸಿ ರಸ್ತೆಯಲ್ಲಿ, ಶಾಲಾ ವ್ಯಾನ್‌ಗಳು ಮತ್ತು ಇತರ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸಬೇಡಿ ಮತ್ತು ಅವುಗಳನ್ನು ಶಾಲೆಯ ಆವರಣದೊಳಗೆ ನಿಲ್ಲಿಸುವಂತೆ ಶಾಲೆಗಳಿಗೆ ತಿಳಿಸಲಾಗಿದೆ. ಶಾಲೆಗಳು ಕೂಡ ಮಕ್ಕಳನ್ನು ಕರೆದುಕೊಂಡು ಹೋಗಲು ಹಾಗೂ ಮಕ್ಕಳನ್ನು ಬಿಡಲು ಪೋಷಕರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡುತ್ತಿವೆ. ಅಲ್ಲದೆ, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ವ್ಯಾಲೆಟ್ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಿದ್ದು, ಇದು ವಾರಾಂತ್ಯದಲ್ಲಿ ಟ್ರಾಫಿಕ್ ಒತ್ತಡವನ್ನು ಮತ್ತಷ್ಟು ಕಡಿಮೆ ಮಾಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT