ರಾಜ್ಯ

ಎಸ್'ಡಬ್ಲ್ಯೂಡಿ ಸಮೀಕ್ಷೆ ಬಳಿಕ ಒತ್ತುವರಿ ತೆರವು ಕಾರ್ಯಾಚರಣೆ ಪುನರಾರಂಭಿಸಲು ಬಿಬಿಎಂಪಿ ಮುಂದು!

Manjula VN

ಬೆಂಗಳೂರು: ನಗರದಲ್ಲಿ ಮಳೆನೀರು ಚರಂಡಿಗಳ ಒತ್ತುವರಿ ಸಮೀಕ್ಷೆಯನ್ನು ಡಿಸೆಂಬರ್ 28 ರೊಳಗೆ ಪೂರ್ಣಗೊಳಿಸಿ, ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದ್ದಾರೆ.

ಮಳೆನೀರು ಚರಂಡಿಗಳ ಪ್ರಗತಿ ಪರಿಶೀಲನಾ ಸಭೆ ಮಂಗಳವಾರ ನಡೆದಿದ್ದು, ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ಬೆಂಗಳೂರು ನಗರ ಜಿಲ್ಲೆಯ ತಹಶೀಲ್ದಾರ್ ಮತ್ತು ಭೂಮಾಪಕರೊಂದಿಗೆ ಅತಿಕ್ರಮಣ ತೆರವಿಗೆ ಸಮನ್ವಯ ಸಾಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಬಗ್ಗೆ ತಹಶೀಲ್ದಾರ್‌ಗಳು ಅತಿಕ್ರಮಣದಾರರಿಗೆ ನೋಟಿಸ್ ಜಾರಿ ಮಾಡಿ ಸಾರ್ವಜನಿಕರ ದೂರುಗಳನ್ನು ಆಲಿಸುವಂತೆ ತಿಳಿಸಿದರು.

ಯಲಹಂಕದಲ್ಲಿ ಸಮೀಕ್ಷೆ ಪೂರ್ಣಗೊಂಡಿದೆ. ಡಿಸೆಂಬರ್ 28ರೊಳಗೆ ಉಳಿದ ಎಲ್ಲ ವಲಯಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳಬೇಕು. ನಂತರ, ಮಳೆನೀರು ಚರಂಡಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸಲು 15 ದಿನಗಳಲ್ಲಿ ಆದೇಶ ಹೊರಡಿಸಲಾಗುವುದು, ಯಾವುದೇ ಅತಿಕ್ರಮಣದಾರರನ್ನು ಬಿಡಲಾಗುವುದಿಲ್ಲ ಎಂದು ಎಚ್ಚರಿಸಿದರು.

ಮಳೆನೀರು ಚರಂಡಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಈಗಾಗಲೇ ಕ್ಷೇತ್ರವಾರು ಪ್ಯಾಕೇಜ್ ಮೂಲಕ ಟೆಂಡರ್ ಆಹ್ವಾನಿಸಿ ಕಾಮಗಾರಿ ಆರಂಭಿಸಲಾಗಿದೆ. ಇನ್ನಷ್ಟೇ ಆರಂಭವಾಗಬೇಕಿರುವ ಕಾಮಗಾರಿಗಳನ್ನು ಅಧಿಕಾರಿಗಳು ಕೂಡಲೇ ಆರಂಭಿಸುವಂತೆ ಎಸ್‌ಡಬ್ಲ್ಯುಡಿ ಮುಖ್ಯ ಎಂಜಿನಿಯರ್‌ಗೆ ಮುಖ್ಯ ಆಯುಕ್ತರು ಸೂಚಿಸಿದರು.

SCROLL FOR NEXT