ಸಿಎಂ ಬಸವರಾಜ ಬೊಮ್ಮಾಯಿ ಮತ್ತಿತರರು 
ರಾಜ್ಯ

ಜ.12 ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವ ಜನೋತ್ಸವ: ಸಿಎಂ ಬಸವರಾಜ ಬೊಮ್ಮಾಯಿ

ಈ ಬಾರಿ ರಾಷ್ಟ್ರೀಯ ಯುವ ಜನೋತ್ಸವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಸಲಾಗಿದ್ದು, ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು. 

ಬೆಳಗಾವಿ: ಈ ಬಾರಿ ರಾಷ್ಟ್ರೀಯ ಯುವ ಜನೋತ್ಸವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಸಲಾಗಿದ್ದು, ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು. 

ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯ ನಂತರ ಮಾತನಾಡಿದ ಅವರು,  ಎಲ್ಲ ರಾಜ್ಯಗಳಿಂದ ಸುಮಾರು 7,500  ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದು, ವಸತಿ ಸೌಕರ್ಯ ಮತ್ತು ವೇದಿಕೆಗಳನ್ನು ಸಿದ್ಧ ಪಡಿಸಲು ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯಕ್ಕೆ ಈ ಅವಕಾಶ ದೊರೆತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಯುವ ಸಬಲೀಕರಣ ಸಚಿವ ಅನುರಾಗ್ ಠಾಕೂರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ  ತಿಳಿಸಿದರು.

ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವರಾದ ನಾರಾಯಣಗೌಡ, ಆರ್. ಅಶೋಕ್,  ಅಶ್ವತ್ಥ ನಾರಾಯಣ,  ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಇಲಾಖಾ ಕಾರ್ಯದರ್ಶಿಗಳೂ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಕೋವಿಡ್ ನಿಯಂತ್ರಣ-  ನಾಳೆ ಸಭೆ : ಕೋವಿಡ್ ಹೆಚ್ಚುತ್ತಿರುವ ಬಗ್ಗೆ ರಾಜ್ಯ ಗಂಭೀರವಾಗಿ ತೆಗೆದುಕೊಂಡಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿನ ಬೆಳವಣಿಗೆಗಳು, ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಗಳು, ಯಾವ ರೀತಿ ಪರೀಕ್ಷೆಗಳು ಹೆಚ್ಚಿಸಬೇಕು. ಜಿನೊಮೆಟಿಕ್ ಪರೀಕ್ಷೆ ಮಾಡುವ ಬಗ್ಗೆ, ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸುದೀರ್ಘವಾದ ಕಾರ್ಯಕ್ರಮ ರೂಪಿಸಲು ನಾಳೆ ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT