ಸಚಿವ ಡಾ.ಕೆ.ಸುಧಾಕರ್ 
ರಾಜ್ಯ

ಕೆಲ ದೇಶಗಳಲ್ಲಿನ ಕೋವಿಡ್ ದಿಢೀರ್ ಹೆಚ್ಚಳ ಎಚ್ಚರಿಕೆಯ ಗಂಟೆಯಾಗಿದೆ: ಸಚಿವ ಡಾ.ಕೆ.ಸುಧಾಕರ್

ವಿಶ್ವದಾದ್ಯಂತ ಕೆಲ ದೇಶಗಳಲ್ಲಿನ ಕೋವಿಡ್ ಪ್ರಕರಣಗಳಲ್ಲಿ ದಿಢೀರ್ ಹೆಚ್ಚಳ ನಮಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು: ವಿಶ್ವದಾದ್ಯಂತ ಕೆಲ ದೇಶಗಳಲ್ಲಿನ ಕೋವಿಡ್ ಪ್ರಕರಣಗಳಲ್ಲಿ ದಿಢೀರ್ ಹೆಚ್ಚಳ ನಮಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಬುಧವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೋವಿಡ್ ವಿರುದ್ಧ ಹೋರಾಡಲು ಉತ್ತಮ ಮಾರ್ಗವೆಂದರೆ ಕೋವಿಡ್ ಸೋಂಕು ಬರದಂತೆ ತಡೆಯುವುದಾಗಿದೆ. ಇದಕ್ಕಾಗಿ ನಾವು ಕೋವಿಡ್ ವಿರುದ್ಧದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಮರೆಯಬಾರದು. ಲಸಿಕೆ ಪಡೆಯಿರಿ, ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ.

ವಿಶ್ವದಾದ್ಯಂತ ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಹೆಚ್ಚಾಗುತ್ತಿರುವುದು ನಮಗೆ ಎಚ್ಚರಿಕೆಯ ಗಂಟೆಯಾಗಿದೆ. ರಾಜ್ಯದಲ್ಲಿ ಈವರೆಗೂ ಕೇವಲ ಶೇ.20ರಷ್ಟು ಜನರು ಮಾತ್ರ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಂಡಿದ್ದು, ಎಲ್ಲರೂ ತಪ್ಪದೇ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಂಡು ಈ ಹೋರಾಟದಲ್ಲಿ ಸರ್ಕಾರದ ಜೊತೆ ಕೈಜೋಡಿಸಬೇಕಾಗಿ ಮನವಿ ಮಾಡುತ್ತೇನೆಂದು ತಿಳಿಸಿದ್ದಾರೆ.

ಕೋವಿಡ್ ನಿಂದ ಭಾರತೀಯರು ಸುರಕ್ಷಿತವಾಗಿದ್ದಾರೆ. ನಮ್ಮ ದೇಶದ ಶೇ.100ರಷ್ಟು ಜನಸಂಖ್ಯೆಯೂ ಎರಡು ಡೋಸ್ ಲಸಿಕೆಯನ್ನು ತೆಗೆದುಕೊಂಡಿದ್ದಾರೆ. ಬೂಸ್ಟರ್ ಡೋಸ್ ತೆಗೆದುಕೊಳ್ಳುವಂತೆ ನಾನು ಜನರಿಗೆ ಮನವಿ ಮಾಡುತ್ತೇನೆ. ಎಲ್ಲಾ ವಿಮಾನ ನಿಲ್ದಾಣಗಳಲ್ಲಿಯೂ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಎಲ್ಲಾ ಸಕಾರಾತ್ಮಕ ಪ್ರಕರಣಗಳನ್ನು INSACOG ಗೆ ಕಳುಹಿಸಲಾಗುತ್ತಿದ್ದು, ಯಾವ ರೂಪಾಂತರಿ ವೈರಸ್ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT