ಡಾ.ಕೆ. ಸಿ. ನಾರಾಯಣಗೌಡ 
ರಾಜ್ಯ

ರಾಷ್ಟ್ರೀಯ ಯುವ ಜನೋತ್ಸವ: ಅತ್ಯುತ್ತಮ ಲೋಗೋ ರಚಿಸಿ, 50,000 ರೂ. ಬಹುಮಾನ ಗೆಲ್ಲಿ: ಸಚಿವ ಡಾ.ನಾರಾಯಣಗೌಡ

26ನೇ ರಾಷ್ಟ್ರ ಮಟ್ಟದ ಯುವ ಜನೋತ್ಸವದ ಲೋಗೋವನ್ನು ಅದ್ಭುತವಾಗಿ ರಚಿಸಿದವರಿಗೆ 50, 000 ರೂಪಾಯಿ ಬಹುಮಾನ ನೀಡುವುದಾಗಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಘೋಷಿಸಿದ್ದಾರೆ. 

ಬೆಳಗಾವಿ/ಬೆಂಗಳೂರು: 26ನೇ ರಾಷ್ಟ್ರ ಮಟ್ಟದ ಯುವ ಜನೋತ್ಸವದ ಲೋಗೋವನ್ನು ಅದ್ಭುತವಾಗಿ ರಚಿಸಿದವರಿಗೆ 50, 000 ರೂಪಾಯಿ ಬಹುಮಾನ ನೀಡುವುದಾಗಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಘೋಷಿಸಿದ್ದಾರೆ. 

ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಡಾ.ನಾರಾಯಣಗೌಡ, ಲೋಗೋ, ಮಸ್ಕಟ್ ಹಾಗೂ ಥೀಮ್ ರಚಿಸಿದವರಿಗೆ ನಗದು ಬಹುಮಾನ ನೀಡುವುದಾಗಿ ತಿಳಿಸಿದರು.

ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12 ರಿಂದ 16 ರವರೆಗೂ ರಾಷ್ಟ್ರ ಮಟ್ಟದ ಯುವ ಜನೋತ್ಸವ ನಡೆಯಲಿದ್ದು, ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ.ಅದಕ್ಕಾಗಿ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ದೇಶದ ಎಲ್ಲಾ ರಾಜ್ಯಗಳಿಂದ  7,500 ಯುವ ಕಲಾವಿದರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ.  ಈ ಕಾರ್ಯಕ್ರಮಕ್ಕೆ ವಿಶೇಷ ಲೋಗೋ, ಮಸ್ಕಟ್, ಥೀಮ್ ಬಿಡುಗಡೆ  ಮಾಡಲು ಉದ್ದೇಶಿಸಲಾಗಿದೆ‌ ಎಂದರು. 

ಲೋಗೋ ರಚನಾ ಸ್ಪರ್ಧೆ ಏರ್ಪಡಿಸಲಾಗಿದ್ದು, ಡಿಸೆಂಬರ್‌ 28, ಸಂಜೆ 6 ಗಂಟೆವರೆಗೂ ಗಡುವು ನೀಡಲಾಗಿದೆ. ಆಯ್ಕೆ ಸಮಿತಿ ಆಯ್ಕೆ ಮಾಡುವ ಅತ್ಯುತ್ತಮ ಲೋಗೋ, ಮಸ್ಕಟ್ ವಿನ್ಯಾಸಕಾರರಿಗೆ 50 ಸಾವಿರ ನಗದು ಹಾಗೂ ಅತ್ಯುತ್ತಮ ಥೀಮ್ ರಚಿಸಿದವರಿಗೆ 25 ಸಾವಿರ ನಗದು ಬಹುಮಾನ ನೀಡಲಾಗುವುದು. ಜೊತೆಗೆ 26 ನೇ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಬಳಸಿಕೊಳ್ಳಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್