ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೋವಿಡ್-19 ಉಲ್ಭಣ ಸಾಧ್ಯತೆ: ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ತಾಂತ್ರಿಕ ಸಲಹಾ ಸಮಿತಿ ಸಲಹೆ

ಚೀನಾ, ಜಪಾನ್, ಬ್ರೆಜಿಲ್, ಯುಎಸ್ ಮತ್ತು ಕೊರಿಯಾದಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಗೊಂಡಿದ್ದು, ರಾಜ್ಯದಲ್ಲೂ ಮಹಾಮಾರಿ ಕುರಿತು ಆತಂಕಗಳು ಹೆಚ್ಚಾಗತೊಡಗಿವೆ. ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳ ಕೈಗೊಳ್ಳುವಂತೆ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ.

ಬೆಂಗಳೂರು: ಚೀನಾ, ಜಪಾನ್, ಬ್ರೆಜಿಲ್, ಯುಎಸ್ ಮತ್ತು ಕೊರಿಯಾದಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಗೊಂಡಿದ್ದು, ರಾಜ್ಯದಲ್ಲೂ ಮಹಾಮಾರಿ ಕುರಿತು ಆತಂಕಗಳು ಹೆಚ್ಚಾಗತೊಡಗಿವೆ. ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳ ಕೈಗೊಳ್ಳುವಂತೆ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ.

ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಅಧ್ಯಕ್ಷ ಡಾ ಎಂ ಕೆ ಸುದರ್ಶನ್ ಅವರು ಮಾತನಾಡಿ, ಇದು ಖಂಡಿತವಾಗಿಯೂ ಆತಂಕಕಾರಿ ಬೆಳವಣಿಗೆಯಾಗಿದೆ.  ರಾಜ್ಯವು ಕೂಡಲೇ ಮುಂಜಾಗ್ರತಾ ಕ್ರಮಗಳ ಕೈಗೊಳ್ಳುವುದು ಅಗತ್ಯವಿದೆ. ಮೊದಲನೆಯದಾಗಿ ಮಾಸ್ಕ್ ಕಡ್ಡಾಯ, ಎರಡನೆಯದಾಗಿ, ಬೂಸ್ಟರ್ ಡೋಸ್‌ಗಳ ನೀಡುವುದು ಮತ್ತು ಮೂರನೆಯದಾಗಿ ರೋಗಲಕ್ಷಣಗಳನ್ನು ಹೊಂದಿರುವ ಜನರನ್ನು ಪರೀಕ್ಷಿಸುವ ಕೆಲಸವನ್ನು ಸರ್ಕಾರ ಮಾಡಬೇಕೆಂದು ಹೇಳಿದ್ದಾರೆ.

ಕೋವಿಡ್ ನಿಯಂತ್ರಿಸುವಲ್ಲಿ ಸರ್ಕಾರ ಮೊದಲು ಬೂಸ್ಟರ್ ಡೋಸ್ ಲಸಿಕೆ ನೀಡುವಿಕೆಯನ್ನು ಹೆಚ್ಚಿಸಬೇಕು. ಕೋವಿಡ್ ಲಸಿಕೆಯನ್ನು ಎರಡು ಡೋಸ್ ಪಡೆದ ಎಲ್ಲರೂ ತಕ್ಷಣವೇ ಬೂಸ್ಟರ್ ಡೋಸ್ ತೆಗೆದುಕೊಳ್ಳಬೇಕು, ಅದನ್ನು ಖರೀದಿಸಿ ರಾಜ್ಯದಾದ್ಯಂತ ಜನರಿಗೆ ಲಭ್ಯವಾಗುವಂತೆ ಮಾಡಬೇಕು. ಮುಂದೆ, ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ರೋಗಲಕ್ಷಣಗಳನ್ನು ಇರುವವರನ್ನು ಕೂಡಲೇ ಪರೀಕ್ಷೆಗೊಳಪಡಿಸಿ, ಐಸೋಲೇಷನ್ ನಲ್ಲಿ ಇರಿಸಬೇಕು. ಮಾಸ್ಕ್‌ಗಳನ್ನು ಕಡ್ಡಾಯಗೊಳಿಸುವುದು ಪ್ರಮುಖವಾಗಿದೆ. ಎಲ್ಲಾ ಮುಚ್ಚಿದ ಸ್ಥಳಗಳಲ್ಲಿ ಮತ್ತು ಒಳಾಂಗಣದಲ್ಲಿ ಮಾಸ್ಕ್ ಕಡ್ಡಾಯ ಮಾಡಬೇಕು ಎಂದು ತಿಳಿಸಿದ್ದಾರೆ.

ಇದೇ ವೇಳೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯಗಳಿಗೆ ಬರೆದ ಪತ್ರವನ್ನು ಉಲ್ಲೇಖಿಸಿದ ಡಾ ಸುದರ್ಶನ್ ಅವರು, ಪಾಸಿಟಿವ್ ಬಂದ ಜನರ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಳಿಗಾಗಿ ಜೀನೋಮಿಕ್ ಅನುಕ್ರಮಕ್ಕಾಗಿ ಕಳುಹಿಸಬೇಕು ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT