ರಾಜ್ಯ

ಪ್ರತಿ ತಾಲೂಕಿನಲ್ಲಿ ಕೋವಿಡ್ ಆಸ್ಪತ್ರೆ ಇರಲಿದೆ- ಡಾ. ಕೆ. ಸುಧಾಕರ್ 

Nagaraja AB

ಬೆಳಗಾವಿ/ಬೆಂಗಳೂರು: ದೇಶದಲ್ಲಿ ಓಮಿಕ್ರಾನ್‌ನ ಹೊಸ ಉಪ-ರೂಪಾಂತರಿ ಪತ್ತೆಯಾಗಿದ್ದು, ರಾಜ್ಯ ಸರ್ಕಾರ ಜನರಿಗೆ ಎಚ್ಚರಿಕೆ ನೀಡಿದ್ದು, ಜನದಟ್ಟಣೆ  ಪ್ರದೇಶಗಳಲ್ಲಿ ಮಾಸ್ಕ್  ಧರಿಸುವಂತೆ ಸಲಹೆ ನೀಡಿದೆ.

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ವಿಮಾನ ನಿಲ್ದಾಣದಲ್ಲಿ ಶೇ. 2 ರಷ್ಟು ಪ್ರಯಾಣಿಕರನ್ನು ಯಾದೃಚ್ಛಿಕವಾಗಿ ಪರೀಕ್ಷಿಸಲಾಗುವುದು. ಆಸ್ಪತ್ರೆಗಳು ಆಕ್ಸಿಜನ್ ಪ್ಲಾಂಟ್ ಗಳೊಂದಿಗೆ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು. 

ಪ್ರತಿ ತಾಲ್ಲೂಕಿನಲ್ಲಿ ಕೋವಿಡ್ ಆಸ್ಪತ್ರೆ ಇರುತ್ತದೆ ಮತ್ತು ಖಾಸಗಿ ಆಸ್ಪತ್ರೆಗಳು ಕೂಡಾ ಕೋವಿಡ್ -19 ರೋಗಿಗಳಿಗೆ ಕೆಲವು ಹಾಸಿಗೆಗಳನ್ನು ಕಾಯ್ದಿರಿಸುತ್ತವೆ. ಶೇ. 80 ರಷ್ಟು ಜನರು ಇನ್ನೂ ಬೂಸ್ಟರ್ ಡೋಸ್ ತೆಗೆದುಕೊಂಡಿಲ್ಲ. ಅಂತಹವರು ಕೂಡಲೇ ಡೋಸ್ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. 

ಸಾಕಷ್ಟು ಲಸಿಕೆ ದಾಸ್ತಾನು ಇದೆಯೇ ಎಂದು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ ಕೇಂದ್ರದೊಂದಿಗೆ ಸಂಪರ್ಕದಲ್ಲಿದೆ. ವಿಮಾನ ನಿಲ್ದಾಣದಲ್ಲಿ ಹೊರಗಿನಿಂದ ಬರುವವರನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸುವಂತೆ ಕಾಂಗ್ರೆಸ್ ನಾಯಕ ಯತೀಂದ್ರ ಸಿದ್ದರಾಮಯ್ಯ ಸೂಚಿಸಿದ್ದು, ಕೇಂದ್ರದ ಸಲಹೆಯನ್ನು ರಾಜ್ಯಗಳು ಅನುಸರಿಸುತ್ತಿವೆ ಎಂದು ಸುಧಾಕರ್ ಉತ್ತರಿಸಿದರು.

ಈ ಮಧ್ಯೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆಗೆ ಅನುಮತಿ ಮತ್ತು ಮಾರ್ಗಸೂಚಿಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ದೇಶನಕ್ಕಾಗಿ ಕಾಯುತ್ತಿರುವುದಾಗಿ ತಿಳಿಸಿದರು. 

SCROLL FOR NEXT