ಮಂಗಳೂರು: ದುಷ್ಕರ್ಮಿಗಳಿಂದ ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು
ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಬಳಿ ಶನಿವಾರ ಸಂಜೆ ಚಾಕು ಇರಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಸುರತ್ಕಲ್: ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಬಳಿ ಶನಿವಾರ ಸಂಜೆ ಚಾಕು ಇರಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಮೃತ ವ್ಯಕ್ತಿಯನ್ನು ಕಾಟಿಪಳ್ಯದ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದೆ. ನೈತಂಗಡಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಜಲೀಲ್ ಅವರಿಗೆ ದುಷ್ಕರ್ಮಿಗಳ ಗುಂಪೊಂದು ಚಾಕು ಇರಿದು ಪರಾರಿಯಾಗಿತ್ತು. ನಂತರ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.