ಸಾಂದರ್ಭಿಕ ಚಿತ್ರ 
ರಾಜ್ಯ

ಅಪಾರ್ಟ್‍ಮೆಂಟ್‍ನ 19ನೇ ಮಹಡಿಯಿಂದ ಹಾರಿ ಮಹಿಳೆ ಆತ್ಮಹತ್ಯೆ, ಖಿನ್ನತೆ ಶಂಕೆ!

ಖಿನ್ನತೆಗೊಳಗಾಗಿದ್ದ ಮಹಿಳೆಯೊಬ್ಬರು ತಮ್ಮ ಅಪಾರ್ಟ್ ಮೆಂಟ್ ನ 19ನೇ ಮಹಡಿ ಮೇಲಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ಭಾನುವಾರ ನಡೆದಿದೆ.

ಬೆಂಗಳೂರು: ಖಿನ್ನತೆಗೊಳಗಾಗಿದ್ದ ಮಹಿಳೆಯೊಬ್ಬರು ತಮ್ಮ ಅಪಾರ್ಟ್ ಮೆಂಟ್ ನ 19ನೇ ಮಹಡಿ ಮೇಲಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ಭಾನುವಾರ ನಡೆದಿದೆ.

ಬೆಂಗಳೂರಿನ ತಲಘಟ್ಟಪುರದ ಹಾಲಿಡೇ ವಿಲೇಜ್ ರಿಜಾರ್ಟ್ ರಸ್ತೆಯಲ್ಲಿರುವ ಪೂರ್ವ ಹೈಲ್ಯಾಂಡ್ ಅಪಾರ್ಟ್‍ಮೆಂಟ್‍ನಲ್ಲಿ ಈ ಘಟನೆ ನಡೆದಿದ್ದು, ಸುಮಾರು 40 ವರ್ಷದ ಚರಿಷ್ಮಾ ಸಿಂಗ್ ಎಂಬ ಮಹಿಳೆ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಖಿನ್ನತೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮಧ್ಯಾಹ್ನ 1 ಗಂಟೆ ಸಂದರ್ಭದಲ್ಲಿ ಅಪಾರ್ಟ್‍ಮೆಂಟ್‍ನ 19 ನೇ ಮಹಡಿಯಿಂದ ಹಾರಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಲಘಟ್ಟಪುರ ಪೊಲೀಸರು ತಿಳಿಸಿದ್ದಾರೆ. 

ಇದನ್ನು ಕಂಡ ಅಪಾರ್ಟ್‍ಮೆಂಟ್‍ನ ನಿವಾಸಿಗಳು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬರುವಷ್ಟರಲ್ಲಿ ಚರಿಸ್ಮಾ ಸಿಂಗ್ ಅವರು ಕೊನೆಯುಸಿರೆಳೆದಿದ್ದಾರೆ. ಶವವನ್ನು ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು ತಲಘಟ್ಟಪುರ ಪೊಲೀಸರು ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT