ಚಿರತೆ ಸಾವು 
ರಾಜ್ಯ

ವಿಜಯನಗರ: ವಾಹನ ಢಿಕ್ಕಿಯಾಗಿ ಚಿರತೆ ಸಾವು

ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ವಿಜಯನಗರದಲ್ಲಿ ಭಾನುವಾರ ವರದಿಯಾಗಿದೆ.

ವಿಜಯನಗರ: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ವಿಜಯನಗರದಲ್ಲಿ ಭಾನುವಾರ ವರದಿಯಾಗಿದೆ.

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹೊಳಲು ಗ್ರಾಮದ ಸಮೀಪದ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಗಂಡು ಚಿರತೆ ಅಪಘಾತದಲ್ಲಿ ಸಾವನ್ನಪ್ಪಿದೆ. 

ಚಿರತೆ ದೇಹ ನೋಡಿದ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಚಿರತೆಯನ್ನು ಅಧಿಕಾರಿಗಳು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತಿಂಗಳಲ್ಲಿ 2ನೇ ಚಿರತೆ ಸಾವು
ಈ ಹಿಂದೆ ಇದೇ ವಿಜಯನಗರದಲ್ಲಿ ಅಪರಿಚಿತ ವಾಹನ ಢಿಕ್ಕಿಯಾಗಿ ಮತ್ತೊಂದು ಚಿರತೆ ಸಾವನ್ನಪ್ಪಿತ್ತು. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ 50ರ ರಸ್ತೆಯಲ್ಲಿ ರಸ್ತೆ ದಾಟಲು ಮುಂದಾಗಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿತ್ತು.

ಶಿವಪುರ ಭಾಗದ ಕೂಡ್ಲಿಗಿ ಅರಣ್ಯ ವಲಯದಲ್ಲಿ ಎನ್​​ಆರ್‌ಇಜಿ ಕಾಮಗಾರಿ ಮಾಡಿಸಲು ಗಾರ್ಡ್ ನಾಗರಾಜ ಎಂಬುವರು ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುವಾಗ ಹೆದ್ದಾರಿ 50ರ ರಸ್ತೆಯಲ್ಲಿ ಚಿರತೆ ಸತ್ತು ಬಿದ್ದಿರುವುದನ್ನು ಕಂಡು ತಕ್ಷಣ ಕೂಡ್ಲಿಗಿ ವಲಯ ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT