ಸಂಗ್ರಹ ಚಿತ್ರ 
ರಾಜ್ಯ

ಜಲೀಲ್ ಹತ್ಯೆ ಪ್ರಕರಣ: ಐವರು ಪೊಲೀಸರ ವಶಕ್ಕೆ, ನ್ಯಾಯಯುತ ತನಿಖೆ ಭರವಸೆ ನೀಡಿದ ಸಿಎಂ ಬೊಮ್ಮಾಯಿ

ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್‌ನಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ (45) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು: ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್‌ನಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ (45) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಹಿಳೆಯರೊಂದಿಗೆ ಜಲೀಲ್ ದುರ್ವರ್ತನೆ ತೋರಿದ ಹಿನ್ನೆಲೆಯಲ್ಲಿ ಕೆಲವರು ಆತನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ.
 
ಹತ್ಯೆ ಪ್ರಕರಣ ಸಂಬಂಧ ನಿನ್ನೆಯಷ್ಟೇ ಹೇಳಿಕೆ ನೀಡಿದ ಸಿಎಂ ಬೊಮ್ಮಾಯಿಯವರು, ಪ್ರಕರಣ ಸಂಬಂಧ ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ದಕ್ಷಿಣ ಕನ್ನಡ ಮತ್ತು ಉಡುಪಿಯ ಕಾಟಿಪಳ್ಳದ ಜನರ ಬಳಿ ಮನವಿ ಮಾಡಿಕೊಂಡರು. ಅಲ್ಲದೆ, ಪೊಲೀಸರು ನ್ಯಾಯಯುತ ತನಿಖೆ ನಡೆಸಲಿದ್ದಾರೆಂದು ಭರವಸೆ ನೀಡಿದರು.

ಮಹಿಳೆಯೊಬ್ಬರ ಜೊತೆಗೆ ಜಲೀಲ್ ನಿಕಟ ಸಂಪರ್ಕ ಹೊಂದಿದ್ದು, ಇದು ಇಬ್ಬರ ವ್ಯಕ್ತಿಗಳ ಜೊತೆಗೆ ಮಾತಿನ ಚಕಮಕಿಗೆ ಕಾರಣವಾಗಿದೆ. ಈ ವೇಳೆ ಇಬ್ಬರು ವ್ಯಕ್ತಿಗಳು ಜಲೀಲ್ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ಜಲೀಲ್ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಕಾಲು ಜಾರಿ ಬಿದ್ದಿದ್ದಾನೆ. ಬಳಿಕ ಇಬ್ಬರು ಚಾಕುವಿನಿಂದ ಇರಿದು ಜಲೀಲ್ ನನ್ನು ಹತ್ಯೆ ಮಾಡಿದ್ದಾರೆ.

ಮಹಿಳೆಯೊಬ್ಬರ ಜೊತೆಗಿನ ಸಂಬಂಧ ಕುರಿತು ಕೆಲವು ವ್ಯಕ್ತಿಗಳ ನಡುವೆ ಜಲೀಲ್ ಜಗಳ ಮಾಡಿಕೊಂಡಿದ್ದ. ಈ ವೇಳೆ ಎರಡು ಸಮುದಾಯಗಳ ಪ್ರತಿನಿಧಿಗಳು ಮಧ್ಯೆ ಪ್ರವೇಶಿಸಿ ಸಮಸ್ಯೆ ಪರಿಹರಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣ ಸಂಬಂಧ ನಾವು ಇದೀಗ ಇಬ್ಬರು ಮಹಿಳೆಯರು ಮತ್ತು ಮೂವರು ಪುರುಷರನ್ನು ವಶಕ್ಕೆ ತೆಗೆದುಕೊಂಡಿದ್ದೇವೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮಾತನಾಡಿ, ಹತ್ಯೆಯ ಹಿಂದಿನ ಉದ್ದೇಶದ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು. ಹತ್ಯೆಯ ಹಿಂದಿನ ಕಾರಣಗಳಿಗೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಬೇಕಾಗಿದೆ ಎಂದು ಹೇಳಿದರು.

ಈ ನಡುವೆ ಜಲೀಲ್ ಅವರ ಶವವನ್ನು ಅಂತ್ಯಕ್ರಿಯೆಗೆ ಕೊಂಡೊಯ್ಯಲು ಕುಟುಂಬಸ್ಥರು ನಿರಾಕರಿಸಿದ್ದು, ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಅವರ ಮನೆಗೆ ಭೇಟಿ ನೀಡಿ ಶೀಘ್ರ ತನಿಖೆಗೆ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು. ಬಳಿಕ ರವಿಕುಮಾರ್ ಅವರು ಸ್ಥಳಕ್ಕೆ ಆಗಮಿಸಿ, ತ್ವರಿತ ತನಿಖೆಯ ಭರವಸೆ ನೀಡಿದರು,

ನಂತರ ಆಂಬ್ಯುಲೆನ್ಸ್'ನಲ್ಲಿ ಶವವನ್ನು ಪಂಜಿಮೊಗರು ಮಸೀದಿಗೆ ತೆರಳಲು ಅವಕಾಶ ಮಾಡಿಕೊಟ್ಟರು, ಅಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT