ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಸೇರಿ ಹಲವು ವಿಚಾರ ಕುರಿತು ವರಿಷ್ಠರೊಂದಿಗೆ ವಿಸ್ತೃತ ಚರ್ಚೆ- ಸಿಎಂ ಬೊಮ್ಮಾಯಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ಸೋಮವಾರ ರಾತ್ರಿ ನಡೆದ ವರಿಷ್ಠರ  ಸಭೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವಿಸ್ತೃತವಾದ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ಸೋಮವಾರ ರಾತ್ರಿ ನಡೆದ ವರಿಷ್ಠರ  ಸಭೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವಿಸ್ತೃತವಾದ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಸಚಿವ ಸಂಪುಟ ವಿಸ್ತರಣೆ ಕುರಿತು ಈ ಬಾರಿ ಹೆಚ್ಚಿನ ಚರ್ಚೆ ನಡೆಸಲಾಗಿದೆ. ಎಲ್ಲಾ ವಿವರಗಳನ್ನು ನೀಡಿದ್ದೇನೆ. ಅಂತಿಮ ನಿರ್ಧಾರವನ್ನು ತಾವೇ ಪ್ರಕಟಿಸುವುದಾಗಿ ವರಿಷ್ಠರು ಹೇಳಿರುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಮೀಸಲಾತಿ ವಿಚಾರದ ಬಗ್ಗೆ ಚರ್ಚಿಸಲಾಗಿದ್ದು, ಸಾಮಾಜಿಕ ನ್ಯಾಯವನ್ನು ಮಾನದಂಡವನ್ನಾಗಿ ಇಟ್ಟುಕೊಂಡು ಮೀಸಲಾತಿ ನೀಡಲು ವರಿಷ್ಠರು ಸಲಹೆ ನೀಡಿದ್ದಾರೆ. ಈ ಬಗ್ಗೆ ಸರ್ವ ಪಕ್ಷ ಸಭೆಯಲ್ಲಿ ಚರ್ಚಿಸಿ ವೈಜ್ಞಾನಿಕ ರೀತಿಯಲ್ಲಿ ಮೀಸಲಾತಿ ಹೆಚ್ಚಿಸಲಾಗುವುದು ಎಂದರು.

ಜನವರಿ 12 ರಿಂದ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಲಾಗಿದೆ. ಡಿಸೆಂಬರ್ 30 ರಂದು ಅಮಿತ್ ಶಾ ಮಂಡ್ಯದಲ್ಲಿನ ಕಾರ್ಯಕ್ರಮಕ್ಕೆ ಆಗಮಿಸುವುದು ಖಚಿತವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT