ಸಿಎಂ ಬೊಮ್ಮಾಯಿ 
ರಾಜ್ಯ

ಕೋವಿಡ್ ನಿರ್ಬಂಧ: ಇಂದು ಸಿಎಂ ಮಹತ್ವದ ಸಭೆ, ಹೊಸ ಮಾರ್ಗಸೂಚಿಗಳ ಪ್ರಕಟ ಸಾಧ್ಯತೆ

ಚೀನಾದಲ್ಲಿ ವಿನಾಶಕ್ಕೆ ಕಾರಣವಾಗಿರುವ ಓಮಿಕ್ರಾನ್ ರೂಪಾಂತರಿ ವೈರಸ್ ಭಾರತದಲ್ಲಿಯೂ ಪತ್ತೆಯಾಗಿದ್ದು, ಹೊಸ ವರ್ಷದ ಮುನ್ನಾದಿನದ ಆಚರಣೆಗೆ ಮುಂಚಿತವಾಗಿ ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿಗಳನ್ನು ರೂಪಿಸಲು ಮುಂದಾಗಿದೆ.

ಬೆಂಗಳೂರು: ಚೀನಾದಲ್ಲಿ ವಿನಾಶಕ್ಕೆ ಕಾರಣವಾಗಿರುವ ಓಮಿಕ್ರಾನ್ ರೂಪಾಂತರಿ ವೈರಸ್ ಭಾರತದಲ್ಲಿಯೂ ಪತ್ತೆಯಾಗಿದ್ದು, ಹೊಸ ವರ್ಷದ ಮುನ್ನಾದಿನದ ಆಚರಣೆಗೆ ಮುಂಚಿತವಾಗಿ ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿಗಳನ್ನು ರೂಪಿಸಲು ಮುಂದಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಬೆಳಗಾವಿಯಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್, ಕಂದಾಯ ಸಚಿವ ಆರ್ ಅಶೋಕ ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ.

ನಿನ್ನೆಯಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿಯವರು, "ಕೇಂದ್ರವು ಈಗಾಗಲೇ ನಮಗೆ ಹಲವಾರು ಸೂಚನೆಗಳನ್ನು ನೀಡಿದ್ದು, ಅವುಗಳ ಆಧಾರದ ಮೇಲೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಅಂತರರಾಷ್ಟ್ರೀಯ ಪರಿಣಾಮಗಳನ್ನು ಪರಿಗಣನೆಗೆ ತೆಗೆದುಕೊಂಡು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದರು.

ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯ ಸರ್ಕಾರವು ತೆರೆದ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲು ನಿರ್ಧರಿಸಿದೆ. ಐಎಲ್ಐ ಮತ್ತು ಸಾರಿ ರೋಗಲಕ್ಷಣಗಳನ್ನು ಹೊಂದಿರುವವರಿಗೆ ಕಡ್ಡಾಯ ಪರೀಕ್ಷೆಗಳನ್ನು ಸಹ ಅಧಿಕಾರಿಗಳು ಸೂಚಿಸಿದ್ದಾರೆ.

ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯವು ಲಾಕ್‌ಡೌನ್ ಅಥವಾ ಇತರ ತೀವ್ರ ನಿರ್ಬಂಧಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿಲ್ಲ ಎಂದು ಅಶೋಕ ಅವರು ಹೇಳಿದ್ದಾರೆ.

"ನಾವು ಸಾರ್ವಜನಿಕರಲ್ಲಿ ಭಯವನ್ನು ಉಂಟುಮಾಡಲು ಬಯಸುವುದಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ನಾವು ಬಯಸುತ್ತೇವೆ. ಮಾಸ್ಕ್ ಗಳನ್ನು ಧರಿಸುವಂತಹ ನಿಯಮಗಳು ಮರಳಿ ಬರಲಿವೆ, ವಿಶೇಷವಾಗಿ ಒಳಾಂಗಣದಲ್ಲಿ ಮತ್ತು ಹವಾನಿಯಂತ್ರಿತ ಸಭಾಂಗಣಗಳಲ್ಲಿ ಕಡ್ಡಾಯ ಮಾಡಲಾಗುತ್ತದೆ ಎಂದು ತಿಳಿಸಿದರು.

ಸರ್ಕಾರದ ನಿರ್ಬಂಧಗಳು ಜನರು ಆತಂಕಗೊಳ್ಳುವಂತೆ ಮಾಡುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿ, ಕರ್ನಾಟಕಕ್ಕೆ ಬಂದಿಳಿಯುವ ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಮಾತ್ರ ಸರ್ಕಾರ ಪರೀಕ್ಷೆಗೊಳಗಾಗುವುದನ್ನು ಕಡ್ಡಾಯಗೊಳಿಸಲಿದೆ ಎಂದರು.

"ರಾಜ್ಯ ಅಥವಾ ದೇಶದೊಳಗೆ ಪ್ರಯಾಣಿಸಲು ಯಾವುದೇ ನಿರ್ಬಂಧಗಳಿಲ್ಲ, ಏಕೆಂದರೆ ಪರಿಸ್ಥಿತಿ ಅಷ್ಟು ಹದಗೆಟ್ಟಿಲ್ಲ. ಸೋಮವಾರದ ಸಭೆಯಲ್ಲಿ ಆಮ್ಲಜನಕ ಹಾಸಿಗೆಗಳು, ಐಸಿಯುಗಳು, ಔಷಧಗಳು ಮತ್ತು ಇತರ ಸೌಲಭ್ಯಗಳಂತಹ ಮೂಲಸೌಕರ್ಯಗಳ ಸಿದ್ಧತೆಗಳು ಮತ್ತು ಪರೀಕ್ಷೆ ಹೆಚ್ಚಳ ಕುರಿತು ಚರ್ಚಿಸುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT