ಕಾರು ಅಪಘಾತ, ಪ್ರಹ್ಲಾದ್ ಮೋದಿ 
ರಾಜ್ಯ

ಮೈಸೂರು: ಪ್ರಧಾನಿ ಮೋದಿ ಸಹೋದರ ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಪ್ರಹ್ಲಾದ್ ಮೋದಿಗೆ ಗಂಭೀರ ಗಾಯ

ಮೈಸೂರು ತಾಲೂಕಿನ ಕಡಕೊಳ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ...

ಮೈಸೂರು: ಮೈಸೂರು ತಾಲೂಕಿನ ಕಡಕೊಳ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಹ್ಲಾದ್ ಮೋದಿ ಅವರು ಇಂದು ಬೆಳಗ್ಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಖಾಸಗಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಕಾರಿನಲ್ಲಿ ಪ್ರಹ್ಲಾದ್ ಮೋದಿ, ಅವರ ಮಗ, ಸೊಸೆ, ಮೊಮ್ಮಗ ಮತ್ತು ಚಾಲಕ ಇದ್ದರು. ಗಾಯಗೊಂಡಿರುವ ಅವರನ್ನು ಕೂಡಲೇ ಮೈಸೂರಿನ ಎಂಜಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಹ್ಲಾದ್ ಮೋದಿ ಅವರ ದವಡೆಗೆ ಗಾಯಗಳಾಗಿದ್ದು, ಅವರ ಸೊಸೆ ತಲೆಗೆ ಗಾಯವಾಗಿದೆ. ಇತರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ವಿಷಯ ತಿಳಿಯುತ್ತಿದ್ದಂತೆ ಮೈಸೂರು ಎಸ್​ಪಿ ಸೀಮಾ ಲಾಟ್ಕರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ