ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ನಿರ್ಮಾಣ ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಒಂದೇ ವರ್ಷದಲ್ಲಿ ನೂರಕ್ಕೂ  ಹೆಚ್ಚು ಪೊಲೀಸ್  ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಬೆಳಗಾವಿ: ರಾಜ್ಯದಲ್ಲಿ ಒಂದೇ ವರ್ಷದಲ್ಲಿ ನೂರಕ್ಕೂ  ಹೆಚ್ಚು ಪೊಲೀಸ್  ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿ ಪೊಲೀಸ್  ಆಯುಕ್ತರ ನೂತನ ಕಚೇರಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. 

ವಾಹನ ಖರೀದಿ 
ಪೊಲೀಸ್  ‌ಗೃಹ ಮಂಡಳಿಯಿಂದ  ರಾಜ್ಯಾದ್ಯಂತ ಒಳ್ಳೆಯ ಕೆಲಸ ಆಗುತ್ತಿದೆ.‌ರಾಜ್ಯದಲ್ಲಿ 2500 ಪೊಲೀಸ್ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದು, ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣದ ಹಂತದಲ್ಲಿವೆ. ‌ಒಂದೇ ವರ್ಷದಲ್ಲಿ ನೂರಕ್ಕೂ  ಹೆಚ್ಚು ಪೊಲೀಸ್  ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 80 ಕೋಟಿ ರೂ.ಗಳ ವೆಚ್ಚದಲ್ಲಿ 300 ಜೀಪ್ ಹಾಗೂ ಸ್ಕಾರ್ಪಿಯೊ ಖರೀದಿ ಮಾಡಲಾಗುತ್ತಿದೆ.‌ಡಿವೈ ಎಸ್ಪಿಗಳಿಗೆ ಸ್ಕಾರ್ಪಿಯೊ ವಾಹನಗಳನ್ನು  ನೀಡಲಾಗುತ್ತಿದೆ ಎಂದರು.

ಜನರೊಂದಿಗೆ ನಿಕಟ ಸಂಪರ್ಕ
ಗೃಹ ಇಲಾಖೆ ಅತ್ಯಂತ ದಕ್ಷತೆಯಿಂದ ಕೆಲಸ ಮಾಡುತ್ತಿದೆ. ಕರ್ನಾಟಕ ಪೊಲೀಸ್ ಪಡೆಗೆ ಅಭಿನಂದನೆ ಸಲ್ಲಿಸಿದ ಅವರು,  ಗಡಿ ಭಾಗದಲ್ಲಿ ಕೇವಲ ಶಕ್ತಿ ಪ್ರದರ್ಶನ ಮಾಡುವುದಲ್ಲ.‌ ಜನರ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡು ಅವರ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು‌.‌ ಗಡಿ ಭಾಗದ ಸಮಸ್ಯೆ  ಪರಿಹರಿಸಿದರೆ ಹೆಚ್ಚು ಅನುಕೂಲ . ಇತ್ತೀಚೆಗೆ ವಿದ್ವಂಸಕ ಕೃತ್ಯಗಳು ನಡೆಯುತ್ತಿವೆ‌ ಅವುಗಳನ್ನು ಅತ್ಯಂತ ವೇಗವಾಗಿ ಪತ್ತೆ ಹಚ್ಚುವ ಕೆಲಸ ಆಗುತ್ತಿದೆ. ದಕ್ಷತೆಯಿಂದ ನಮ್ಮ ಪೊಲಿಸರು ಕೆಲಸ ಮಾಡುತ್ತಿದ್ದಾರೆ‌. ನಾನು ಗೃಹ ಸಚಿವನಾಗಿದ್ದಾಗ ಅಡಿಗಲ್ಲು ಹಾಕಿದ ಕಟ್ಟಡಗಳು ಈಗ ಉದ್ಘಾಟನೆಯಾಗುತ್ತಿವೆ‌ .ಎಫ್ ಎಸ್ ಎಲ್ ರಿಪೋರ್ಟ್ 15 ದಿನದಲ್ಲಿ ಬಂದರೆ ಅಪರಾಧ ನಿಯಂತ್ರಣಕ್ಕೆ ಹೆಚ್ಚು ಅನುಕೂಲ ಆಗುತ್ತದೆ ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಳಾ ಅಂಗಡಿ, ಶಾಸಕ  ಅನಿಲ್ ಬೆನಕೆ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!