ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನ ಮಿಕ್ಸರ್ ಗ್ರೈಂಡರ್ ಸ್ಫೋಟ ಪ್ರಕರಣ: ಪೊಲೀಸರಿಂದ ಓರ್ವನ ಬಂಧನ; ವಿಚ್ಛೇದಿತ ಮಹಿಳೆಯ ಹಿಂದೆ ಬಿದ್ದ ಪಾಗಲ್ ಪ್ರೇಮಿ ಕೃತ್ಯ?

ಹಾಸನದ ಕುವೆಂಪುನಗರ ಕೊರಿಯರ್ ಸೆಂಟರ್‌ನಲ್ಲಿ ಮಿಕ್ಸರ್ ಗ್ರೈಂಡರ್ ಸ್ಫೋಟಗೊಂಡು ಡಿಟಿಡಿಸಿ ಕೊರಿಯರ್ ಸೆಂಟರ್ ಮಾಲೀಕ ಶಶಿಕುಮಾರ್ ತೀವ್ರವಾಗಿ ಗಾಯಗೊಂಡ ಪ್ರಕರಣ ಸಂಬಂಧ ಓರ್ವನನ್ನು ಪೊಲೀಸರು ಬಂದಿಸಿದ್ದಾರೆ

ಬೆಂಗಳೂರು: ಹಾಸನದ ಕುವೆಂಪುನಗರ ಕೊರಿಯರ್ ಸೆಂಟರ್‌ನಲ್ಲಿ ಮಿಕ್ಸರ್ ಗ್ರೈಂಡರ್ ಸ್ಫೋಟಗೊಂಡು ಡಿಟಿಡಿಸಿ ಕೊರಿಯರ್ ಸೆಂಟರ್ ಮಾಲೀಕ ಶಶಿಕುಮಾರ್ ತೀವ್ರವಾಗಿ ಗಾಯಗೊಂಡ ಪ್ರಕರಣ ಸಂಬಂಧ ಓರ್ವನನ್ನು ಪೊಲೀಸರು ಬಂದಿಸಿದ್ದಾರೆ.

ಮಹಿಳೆಗೆ ಪಾರ್ಸೆಲ್ ಕಳುಹಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ, ಆದರೆ ಸೋಮವಾರ ಸಂಜೆ ಅದನ್ನು ತೆರೆದ ನಂತರ ಏಕೆ ಸ್ಫೋಟಿಸಿತು ಎಂಬ ಬಗ್ಗೆ ಪೊಲೀಸರಿಗೆ ಇನ್ನೂ ಸರಿಯಾದ ಮಾಹಿತಿ ಸಿಕ್ಕಿಲ್ಲ. ಪಾರ್ಸೆಲ್ ಕಳುಹಿಸಿದ್ದವರ ವಿಳಾಸವಿಲ್ಲದ ಕಾರಣ ಮಹಿಳೆ ಅದನ್ನು ಹಿಂತಿರುಗಿಸಿದ್ದಾರೆ.

ಕಳುಹಿಸಿದವರ ಹೆಸರು ಮತ್ತು ವಿಳಾಸವನ್ನು ಬಹಿರಂಗಪಡಿಸಲು ನಿರಾಕರಿಸಿದ ಎಸ್ಪಿ ಹರಿರಾಮ್ ಶಂಕರ್, ವಿಧಿ ವಿಜ್ಞಾನ ಪ್ರಯೋಗಾಲಯದಿಂದ ವರದಿ ಪಡೆದ ನಂತರ ವಿವರಗಳನ್ನು ಹಂಚಿಕೊಳ್ಳುವುದಾಗಿ ಹೇಳಿದರು. ಘಟನೆಯ ಹಿಂದೆ ವೈಯಕ್ತಿಕ ದ್ವೇಷ ಇರಬಹುದೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ವಿಧವೆಯಾಗಿರುವ ಮಹಿಳೆ ಒಂದೇ ವ್ಯಕ್ತಿಯಿಂದ ಮೂರು ಸಣ್ಣ ಪಾರ್ಸೆಲ್‌ಗಳು ಬಂದಿದ್ದವು, ಆದರೆ ಅವುಗಳನ್ನು ತೆರೆಯದೆ ಬಿಸಾಡಿದ್ದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಮೊದಲ ಮಹಿಳಾ ಟೆಸ್ಟ್ ಪಂದ್ಯ: ಲಾರ್ಡ್ಸ್ ನಲ್ಲಿ ಅಪರೂಪದ ದಾಖಲೆ ಬರೆದ ಸ್ಮೃತಿ ಮಂಧಾನಾ! ಆಕರ್ಷಕ ಅರ್ಧಶತಕ