ಸಂಗ್ರಹ ಚಿತ್ರ 
ರಾಜ್ಯ

ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ: ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಹಾಸ್ಟೆಲ್ ಖಾಲಿ ಮಾಡುವಂತೆ ಸೂಚನೆ, ವಿದ್ಯಾರ್ಥಿಗಳ ಆಕ್ರೋಶ

ಜನವರಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ ಹುಬ್ಬಳ್ಳಿಯಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯವರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 9 ದಿನಗಳ ಕಾಲ ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಲಾಗಿದ್ದು, ಇದಕ್ಕೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ (ಕೆಯುಡಿ) ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಕಿಡಿಕಾರಿದ್ದಾರೆ.

ಹುಬ್ಬಳ್ಳಿ: ಜನವರಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ ಹುಬ್ಬಳ್ಳಿಯಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯವರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 9 ದಿನಗಳ ಕಾಲ ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಲಾಗಿದ್ದು, ಇದಕ್ಕೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ (ಕೆಯುಡಿ) ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಕಿಡಿಕಾರಿದ್ದಾರೆ.

ಐದು ದಿನಗಳ ಕಾಲ ಯುವಜನೋತ್ಸವ ನಡೆಯಲಿದ್ದು, ಜನವರಿ 12 ರಂದು ಪ್ರಧಾನಿ  ಮೋದಿಯವರು ಕಾಲೇಜು ಮೈದಾನದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ, ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾರತದಾದ್ಯಂತ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ವಿವಿ ನಿರ್ಧಾರಕ್ಕೆ ವಿದ್ಯಾರ್ಥಿಗಲು ಕಿಡಿಕಾರಿದ್ದು, ಹಾಸ್ಟೆಲ್ ಗಳನ್ನು ಖಾಲಿ ಮಾಡುವಂತೆ ಸೂಚಿಸುತ್ತಿರುವ ವಿವಿಯು ಶಾಲಾ ಹಾಸ್ಟೆಲ್ ಗಳನ್ನು ಬಳಕೆ ಮಾಡಿಕೊಳ್ಳಬಹುದಿತ್ತು. ಲಾಡ್ಜ್ ಗಳನ್ನು ಕಾಯ್ದಿರಿಸಬಹುದಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಟೆಂಟ್ ಗಳನ್ನು ಹಾಕಬಹುದಿತ್ತು ಎಂದು ಹೇಳಿದ್ದಾರೆ.

ಕಾರ್ಯಕ್ರಮಕ್ಕಾಗಿ 20 ಕೋಟಿ ರೂಪಾಯಿ ಖರ್ಚು ಮಾಡಲು ಸರ್ಕಾರ ಮುಂದಾಗಿದೆ. ಆದರೆ, ಭಾಗವಹಿಸುವವರಿಗೆ ತಂಗಲು ವ್ಯವಸ್ಥೆ ಮಾಡಲು ಸಾಧ್ಯವಾಗದಿರುವುದು ವಿಚಿತ್ರ ಎನಿಸುತ್ತಿದೆ. ನಮ್ಮ ಪಠ್ಯಕ್ರಮವು ನಿಗದಿತ ಸಮಯಕ್ಕಿಂತ ಹಿಂದೆ ಉಳಿದಿದೆ. ಈ ಸಮಯದಲ್ಲಿ ನಮ್ಮನ್ನು ಹಾಸ್ಟೆಲ್ ಖಾಲಿ ಮಾಡುವಂತೆ ಹೇಳುವುದು ಸರಿಯಲ್ಲ ಎಂದು ಮತ್ತೊಬ್ಬ ವಿದ್ಯಾರ್ಥಿ ಹೇಳಿದ್ದಾರೆ.

ಕರ್ನಾಟಕ ವಿಶ್ವವಿದ್ಯಾಲಯದ (ಕೆಯುಡಿ) ಅಧಿಕಾರಿಗಳು ಮಾತನಾಡಿ, ಕಾರ್ಯಕ್ರಮ ಯಶಸ್ವಿಗೊಳ್ಳಲು ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

“ವಿದ್ಯಾರ್ಥಿಗಳನ್ನು ಬಲವಂತವಾಗಿ ಸ್ಥಳಾಂತರಿಸುವುದಿಲ್ಲ. ಕಾರ್ಯಕ್ರಮ ಮುಗಿಯುವವರೆಗೆ ಅವರ ಸಾಮಾನು ಸರಂಜಾಮುಗಳನ್ನು ಇಡಲು ನಾವು ವ್ಯವಸ್ಥೆ ಮಾಡಿದ್ದೇವೆ. ಅವರಿಗೆ ರಜೆ ಘೋಷಿಸಲಾಗಿದೆ ಎಂದು ಕೆಯುಡಿ ಉಪಕುಲಪತಿ ಬಿ ಗುಡಸಿ ತಿಳಿಸಿದ್ದಾರೆ.

ಅಧ್ಯಾಪಕರೊಬ್ಬರು ಮಾತನಾಡಿ, “ಕೋರ್ಸು ನಿಗದಿತ ಅವಧಿಗಿಂತ ಹಿಂದಿದ್ದರೂ ವಿಶ್ವವಿದ್ಯಾಲಯವು ಯಾವುದೇ ಅತಿಥಿ ಉಪನ್ಯಾಸಕರನ್ನು ನೇಮಿಸಿಲ್ಲ. ರಜಾದಿನಗಳನ್ನು ಘೋಷಿಸುವುದರಿಂದ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಮತ್ತಷ್ಟು ವಿಳಂಬವಾಗುತ್ತದೆ. ಮನೆಗೆ ಹೋಗುವುದಕ್ಕಿಂತ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾವು ಬಯಸುತ್ತೇವೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT