ಹಿರಿಯ ನಾಯಕ ಆರ್ ವಿ ದೇಶಪಾಂಡೆಯವರಿಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಇಂದು ಬೆಳಗಾವಿ ಅಧಿವೇಶನದಲ್ಲಿ ನೀಡಲಾಯಿತು. 
ರಾಜ್ಯ

ಬೆಳಗಾವಿ ಅಧಿವೇಶನ: ಕಾಂಗ್ರೆಸ್ ಹಿರಿಯ ನಾಯಕ ಆರ್ ವಿ ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ (Winter Session in Belagavi) 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಕಾಂಗ್ರೆಸ್ ನ ಹಿರಿಯ ನಾಯಕ ಆರ್ ವಿ ದೇಶಪಾಂಡೆಯವರಿಗೆ ನೀಡಲಾಯಿತು.

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ (Winter Session in Belagavi) 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಕಾಂಗ್ರೆಸ್ ನ ಹಿರಿಯ ನಾಯಕ ಆರ್ ವಿ ದೇಶಪಾಂಡೆಯವರಿಗೆ ನೀಡಲಾಯಿತು.

ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆಗೆ (Raghunath Vishwanath Rao Deshpande) ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಕಳೆದ ವರ್ಷ ಶಿಕಾರಿಪುರ ಕ್ಷೇತ್ರದ ಶಾಸಕ ಬಿ ಎಸ್ ​ಯಡಿಯೂರಪ್ಪ ಅವರ ಪಾಲಾಗಿತ್ತು. ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಕಳೆದ ವರ್ಷದಿಂದ ನೀಡಲಾಗುತ್ತಿದೆ.

75 ವರ್ಷ ವಯಸ್ಸಿನ ಹಿರಿಯ ನಾಯಕ ದೇಶಪಾಂಡೆ ಅವರು ಇದುವರೆಗೆ 9 ಬಾರಿ ವಿಧಾನಸಭೆ ಚುನಾವಣೆ ಎದುರಿಸಿದ್ದಾರೆ. ದೇಶಪಾಂಡೆ ಅವರು ತಮ್ಮ ಹುಟ್ಟೂರಾದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಅಸೆಂಬ್ಲಿ ಕ್ಷೇತ್ರವನ್ನು ಕಾಂಗ್ರೆಸ್​ ವತಿಯಿಂದ ಪ್ರತಿನಿಧಿಸಿದ್ದಾರೆ.

1947 ಮಾರ್ಚ್​ 16ರಂದು ಜನಿಸಿದ ದೇಶಪಾಂಡೆ ಅವರು ಬಿಎ, ಎಲ್​ಎಲ್​ಬಿ ವ್ಯಾಸಂಗ ಮಾಡಿದ್ದಾರೆ. ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಸಾರ್ವಜನಿಕ ಸೇವೆಗೆ ಅಂಕಿತರಾದ ದೇಶಪಾಂಡೆ ಅವರು ಜನತಾಪರಿವಾರದೊಂದಿಗೆ ವಿಧಾನಸಭೆ ಪ್ರವೇಶಿಸಿದರು. ಎಸ್​ ಎಂ ಕೃಷ್ಣ ಮತ್ತು ಸಿದ್ದರಾಮಯ್ಯ ಸಂಪುಟದಲ್ಲಿ ಅತ್ಯಂತ ದೀರ್ಘಾವಧಿಗೆ 13 ವರ್ಷ ಕಾಲ ಕೈಗಾರಿಕಾ ಸಚಿವರಾಗಿದ್ದರು.

ಪೂರ್ವ ನಿಗದಿ ಪ್ರಕಾರ ನಾಡಿದ್ದು ಶುಕ್ರವಾರ ಬೆಳಗಾವಿ ಅಧಿವೇಶನ ಮುಗಿಯಬೇಕಾಗಿದೆ. ಆದರೆ ನಿಗದಿತ ಅವಧಿಗಿಂತ ಒಂದು ದಿನ ಮೊದಲೇ ನಾಳೆ ಗುರುವಾರವೇ ವಿಧಾನಮಂಡಲ ಅಧಿವೇಶನ ಅಂತ್ಯವಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT