ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಿದ ಸಿಎಂ ಬೊಮ್ಮಾಯಿ 
ರಾಜ್ಯ

ರಾಜ್ಯದಲ್ಲಿ 42,000 ಪೌರಕಾರ್ಮಿಕರನ್ನು ಖಾಯಂಗೊಳಿಸಲು ಕ್ರಮ- ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ  ಸುಮಾರು 42 ಸಾವಿರ ಪೌರ ಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಳಗಾವಿ: ರಾಜ್ಯದಲ್ಲಿ  ಸುಮಾರು 42 ಸಾವಿರ ಪೌರ ಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು,  ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆ ನೀಡಲಾಗುತ್ತಿದ್ದು, ಅವರ ಆರೋಗ್ಯ ,ಅವರ ಮಕ್ಕಳ ಆರೋಗ್ಯ ಹಿತರಕ್ಷಣೆಗೆ ಆದ್ಯತೆ ನೀಡಲಾಗಿದೆ ಎಂದರು.

 ಎಸ್ ಸಿ ಎಸ್ ಟಿ ಜನಾಂಗಕ್ಕೆ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಈ ನಿರ್ಣಯಕ್ಕೆ ಗಟ್ಟಿಯಾಗಿ ನಿಲ್ಲಲು ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಪೌರ ನೌಕರರ ಸೇವೆಯನ್ನು ಸರ್ಕಾರ ಗುರುತಿಸಿದೆ. ಬರುವ ದಿನಗಳಲ್ಲಿ ಪೌರನೌಕರರ ಮಕ್ಕಳಿಗೆ  ಉತ್ತಮ ವಿದ್ಯೆ ನೀಡಿ, ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕು. ಇದಕ್ಕೆ ಸರ್ಕಾರ ಎಲ್ಲ ಸಹಕಾರ ನೀಡುತ್ತದೆ ಎಂದು ಅವರು ತಿಳಿಸಿದರು.

ಎಸ್ ಸಿ ಎಸ್ ಟಿ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶೇಷ ತರಬೇತಿಯನ್ನು ನೀಡುವಂತೆ, ಪೌರನೌಕರರ ಮಕ್ಕಳು ಸಿಇಟಿ ಸೇರಿದಂತೆ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ವಿಶೇಷ ತರಬೇತಿಯನ್ನು ನೀಡಲು ಸರ್ಕಾರ ಸಿದ್ಧವಿದೆ. ಪೌರಕಾರ್ಮಿಕರ ಆರೋಗ್ಯ ರಕ್ಷಣೆ, ಮಕ್ಕಳ ಶಿಕ್ಷಣ, ಮನೆ ನಿರ್ಮಾಣಗಳಿಗೆ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, ಪೌರಕಾರ್ಮಿಕರ ಇವುಗಳ ಲಾಭವನ್ನು ಪಡೆಯಬೇಕು ಎಂದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT