ಬಸವರಾಜ ಬೊಮ್ಮಾಯಿ 
ರಾಜ್ಯ

ಲಿಂಗಾಯತ, ಒಕ್ಕಲಿಗರಿಗೆ ಹೊಸ ಕೆಟಗರಿ ಸೃಷ್ಟಿಸಿದ ರಾಜ್ಯ ಸರ್ಕಾರ; ರಾಜ್ಯದ ಎರಡು ಪ್ರಬಲ ಸಮುದಾಯಕ್ಕೆ 2ಸಿ, 2ಡಿ ಮೀಸಲಾತಿ

ರಾಜ್ಯ ಸರ್ಕಾರ ಕೊನೆಗೂ ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಮತ್ತು ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಹತ್ವದ...

ಬೆಳಗಾವಿ: ರಾಜ್ಯ ಸರ್ಕಾರ ಕೊನೆಗೂ ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಮತ್ತು ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ.

ರಾಜ್ಯ ಸರ್ಕಾರ ಲಿಂಗಾಯತ ಮತ್ತು ಒಕ್ಕಲಿಗರಿಗೆ ಹೊಸ ಕೆಟಗರಿ ಸೃಷ್ಟಿ ಮಾಡಿದ್ದು, 3ಎ ನಲ್ಲಿದ್ದ ಒಕ್ಕಲಿಗರನ್ನು 2ಸಿಗೆ ಮತ್ತು 3 ಬಿ ನಲ್ಲಿದ್ದ ಲಿಂಗಾಯತರನ್ನು 2ಡಿ ಕೆಟಗರಿಯಲ್ಲಿ ಮೀಸಲಾತಿ ನೀಡಲಾಗಿದೆ. ಆದರೆ ಮೀಸಲಾತಿ ಪ್ರಮಾಣವನ್ನು ನಂತರ ನಿರ್ಧರಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಹೇಳಿದ್ದಾರೆ.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ, 2ಎ ಮೀಸಲಾತಿ ಕೇಳಿದ್ದ ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತರಿಗೆ 2 ಡಿ ಕೆಟಗರಿಯಲ್ಲಿ ಮೀಸಲಾತಿ ನೀಡಲಾಗಿದೆ. 3ಎ ನಲ್ಲಿದ ಒಕ್ಕಲಿಗರಿಗೆ 2ಸಿ ಮೀಸಲಾತಿ ನೀಡಲಾಗಿದೆ. ಇದರಿಂದ 2ಎ ಮತ್ತು 2 ಬಿ ಮೀಸಲಾತಿಯಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ಈ ಸಂಬಂಧ ಕಳೆದ ವಾರ ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ್ದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು, ಪಂಚಮಶಾಲಿ ಸಮುದಾಯವನ್ನು ಈಗಿರುವ 3ಬಿಯಿಂದ 2ಬಿಗೆ ಸೇರ್ಪಡೆ ಮಾಡುವ ಬದಲು ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಮೀಸಲಾತಿ ನೀಡಬೇಕೆಂದು ಶಿಫಾರಸು ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT